ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಕೆಲ ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೆಂಬಲ ವ್ಯಕ್ತಪಡಿಸಿದ್ದು, ಇದೇ ಗುರುವಾರ (ಜ.6) ತರಗತಿಗಳನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.
ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಮುಷ್ಕರ ನಡೆಸುತ್ತಿದ್ದಾರೆ. ಅವರ ಪ್ರತಿಭಟನೆಗೆಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆ ಬೆಂಬಲ ಸೂಚಿಸಿದೆ.
‘ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಎಲ್ಲ ಅತಿಥಿ ಉಪನ್ಯಾಸಕರು ತಮ್ಮ ತರಗತಿಗಳನ್ನು ಬಹಿಷ್ಕಾರ ಮಾಡಲಿದ್ದಾರೆ. ಈ ಕೂಡಲೇ ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ಅವರ ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು.ವಾರಕ್ಕೆ 10ರಿಂದ 12 ಗಂಟೆಗಳಿಗಿಂತ ಹೆಚ್ಚು ಕಾರ್ಯಾಭಾರ ನೀಡಬಾರದು’ ಎಂದುಸಂಘಟನೆ ಸಂಚಾಲಕರಾಜೇಶ್ ಭಟ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.