ತುರುವೇಕೆರೆ: ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುವಂತಿಲ್ಲ. ಅಲ್ಲದೆ ಖಾಸಗಿ ಆಸ್ಪತ್ರೆಗಳನ್ನು ತೆರೆದರೆ ಅಂತಹ ವೈದ್ಯರನ್ನು ಕೆಲಸದಿಂದ ಅಮಾನತು ಮಾಡಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೌಲಭ್ಯ ದೊರೆಯಬೇಕು. ಈ ದೃಷ್ಟಿಯಿಂದ ಹಿಂದೆ ವೈದ್ಯರ ನೇಮಕಾತಿಗೆ ಸಂಬಂಧಿಸಿದಂತೆ ಜಾರಿಯಲ್ಲಿದ್ದ ಕರ್ನಾಟಕ ಲೋಕಸೇವಾ ಆಯೋಗದ ನಿಯಮಗಳನ್ನು ತೆಗೆದುಹಾಕಲಾಗಿದೆ. ತಜ್ಞರು ಮತ್ತು ಎಂಬಿಬಿಎಸ್ ವೈದ್ಯರನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.