ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ವಿರುದ್ಧ ಕೆಲವರು ಮಾಡಿರುವ ಆರೋಪಗಳ ಕುರಿತು ವಿಚಾರಣೆ ನಡೆಸಿ, ವರದಿ ನೀಡುವಂತೆ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಸಹಕಾರ ಇಲಾಖೆ ಸೂಚಿಸಿದೆ.
ನೌಕರರ ಸಂಘ ಪ್ರತಿ ವರ್ಷ ಸರ್ಕಾರದಿಂದ ಅನುದಾನ ಪಡೆಯುತ್ತಿದೆ. ಆದರೆ, ಗಳಿಸಿದ ಲಾಭಕ್ಕೆ ಆದಾಯ ತೆರಿಗೆ ಸಲ್ಲಿಸಿಲ್ಲ. ಹಣ ದುರುಪಯೋಗ, ನಿಯಮ ಉಲ್ಲಂಘಿಸಿ ಹಲವು ಚಟುವಟಿಕೆಗಳನ್ನು ನಡೆಸಿದೆ. ಸಂಘದ ಅಧ್ಯಕ್ಷರು, ಪದಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೈಗಾರಿಕಾ ಮತ್ತು ವಾಣಿಜ್ಯ ಸಚಿವಾಲಯದ ಅಧೀನ ಕಾರ್ಯದರ್ಶಿ ಶಾಂತಾರಾಮ್, ಸಚಿವಾಲಯದ ಶಾಖಾಧಿಕಾರಿ ಗುರುಸ್ವಾಮಿ, ರಾಯಚೂರಿನ ಜಾನುವಾರು ಅಭಿವೃದ್ಧಿ ಅಧಿಕಾರಿ ಎಂ.ಮಹಬೂಬ್ ಬಾಷಾ, ಭೂಮಾಪನ ಇಲಾಖೆಯ ಶಿವರುದ್ರಯ್ಯ, ರಾಮನಗರ ಜಿಲ್ಲೆ ಅವ್ವೇಹಳ್ಳಿ ಪದವಿಪೂರ್ವ ಕಾಲೇಜು ಉಪನ್ಯಾಸಕ ನಿಂಗೇಗೌಡ ಅವರು ಸಹಕಾರ ಇಲಾಖೆಗೆ ದೂರು ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.