ಬೆಂಗಳೂರು:ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಶೇ 10ರಷ್ಟು ನೀಡಲಾಗುತ್ತಿದ್ದ ಚಿಕಿತ್ಸಾ ಮರುಪಾವತಿ ಮೊತ್ತವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶೇ 30ಕ್ಕೆ ಏರಿಸಿ, ಆದೇಶ ಹೊರಡಿಸಿದೆ.
ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಮೂಲಸೌಕರ್ಯದ ಅಭಿವೃದ್ಧಿಗೆ ಆದ್ಯತೆ ನೀಡುವ ಉದ್ದೇಶದಿಂದ ಚಿಕಿತ್ಸಾ ಮರುಪಾವತಿ ಮೊತ್ತವನ್ನು ಏರಿಕೆ ಮಾಡಲಾಗಿದ್ದು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನ ಮಾಡಲಾಗುತ್ತದೆ. ಚಿಕಿತ್ಸಾ ಮರುಪಾವತಿ ಮೊತ್ತವನ್ನು ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಪ್ರೋತ್ಸಾಹ ಧನದ ರೂಪದಲ್ಲಿ ನೀಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.