ಬೆಂಗಳೂರು: ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಂಕಿತ ಉಗ್ರರನ್ನು ಬಂಧಿಸುವ ಮೂಲಕ ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ರೀತಿಯ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಅಂತಹ ಶಕ್ತಿಗಳನ್ನು ರಾಜ್ಯದಿಂದ ಬೇರು ಸಮೇತ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರಿಗೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.