ADVERTISEMENT

ಜಿ.ಪಂ, ತಾ.ಪಂ ಕ್ಷೇತ್ರ ಪುನರ್‌ವಿಂಗಡಣೆ: ಅಧಿಸೂಚನೆ ಹೊರಡಿಸಿದ ಸರ್ಕಾರ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2023, 21:19 IST
Last Updated 2 ಮಾರ್ಚ್ 2023, 21:19 IST
   

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪುನರ್‌ವಿಂಗಡಿಸಿ ಹಾಗೂ
ಸದಸ್ಯರ ಸಂಖ್ಯೆ ನಿಗದಿ ಮಾಡಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ಪಂಚಾಯತ್‌ ರಾಜ್‌ ಸೀಮಾ ನಿರ್ಣಯ ಆಯೋಗ ಕ್ಷೇತ್ರಗಳನ್ನುಪುನರ್‌ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿಪಡಿಸಿ ಮಾಡಿದ್ದ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿದೆ.

ರಾಜ್ಯದ ಹಲವು ಗ್ರಾಮಗಳು ನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಸೇರಿವೆ. ಕೆಲ
ಗ್ರಾಮಗಳನ್ನು ಸೇರಿಸಿ ಪಟ್ಟಣ ಪಂಚಾಯಿತಿಗಳಾಗಿ ರೂಪಿಸಲಾಗಿದೆ. ಇಂತಹ ಗ್ರಾಮಗಳನ್ನು ಕೈಬಿಟ್ಟು ಕ್ಷೇತ್ರಗಳನ್ನು
ಪುನರ್‌ ವಿಂಗಡಿಸಲಾಗಿದೆ. ಕೆಲ ಜಿಲ್ಲೆಗಳತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆ, ಸದಸ್ಯರ ಸಂಖ್ಯೆ
ಯಲ್ಲಿ ಕಡಿಮೆಯಾಗಿವೆ. ಕೆಲ ಜಿಲ್ಲೆಗಳಲ್ಲಿ ಹೆಚ್ಚಾಗಿವೆ. ಹಲವು ಕ್ಷೇತ್ರಗಳ ಸೀಮಾಗಡಿಯಲ್ಲಿ ವ್ಯತ್ಯಾಸವಾದರೂ, ಕ್ಷೇತ್ರ, ಸದಸ್ಯರ ಸಂಖ್ಯೆ ಯಥಾ ಸ್ಥಿತಿಯಲ್ಲಿವೆ.

ADVERTISEMENT

ಮೊದಲು 40 ಸಾವಿರ ಜನ ಸಂಖ್ಯೆಗೆ ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರ, 10 ಸಾವಿರ ಜನಸಂಖ್ಯೆಗೆ ಒಂದು ತಾಲ್ಲೂಕು ಪಂಚಾಯಿತಿ ಕ್ಷೇತ್ರ ನಗದಿ ಮಾಡಲಾಗಿತ್ತು. ಹೊಸ ಆದೇಶದ ನಂತರ 35 ಸಾವಿರ ಜನ ಸಂಖ್ಯೆಗೆ ಒಂದು ಜಿಲ್ಲಾ ಪಂಚಾಯಿತಿ, 12,500 ಜನ ಸಂಖ್ಯೆಗೆ ಒಂದು ತಾಲ್ಲೂಕು ಪಂಚಾಯಿತಿ ಕ್ಷೇತ್ರ ರಚಿಸಿಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.