ADVERTISEMENT

ಮಹಿಳೆಯರಿಗೆ ರಾತ್ರಿ ಪಾಳಿ: ಸರ್ಕಾರ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2019, 20:00 IST
Last Updated 20 ನವೆಂಬರ್ 2019, 20:00 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕೈಗಾರಿಕೆಗಳಲ್ಲಿ ಮಹಿಳೆಯರು ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸಲು ಇದ್ದ ಗೊಂದಲಕ್ಕೆ ತೆರೆ ಎಳೆದಿರುವ ರಾಜ್ಯ ಸರ್ಕಾರ, ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ.

ಈ ಸಂಬಂಧ ಬುಧವಾರಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಮಹಿಳೆಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಮುಂದೆ ಬಂದರೆ ಮಾತ್ರ ಅವಕಾಶ ಕಲ್ಪಿಸಬೇಕು. ಕಡ್ಡಾಯ ಮಾಡಬಾರದು, ಲಿಖಿತ ಒಪ್ಪಿಗೆ ಪಡೆಯಬೇಕು ಎಂದು ಸೂಚಿಸಲಾಗಿದೆ.

ಷರತ್ತುಗಳು: ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುವ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಲೈಂಗಿಕ ಕಿರುಕುಳ ವಿಚಾರಣಾ ಸಮಿತಿ ರಚಿಸುವುದೂ ಸೇರಿದಂತೆ ಮಹಿಳೆಯರ ಸುರಕ್ಷತೆಗೆ ಎಲ್ಲಾ ರೀತಿಯ ಜಾಗ್ರತೆ ವಹಿಸುವಂತೆ ಸೂಚಿಸಿದೆ.

ADVERTISEMENT

ಕೆಲಸ ನಿರ್ವಹಿಸುವ ಸ್ಥಳವಷ್ಟೇ ಅಲ್ಲದೆ ಮಹಿಳಾ ಕಾರ್ಮಿಕರು ಓಡಾಡುವ ಪ್ರದೇಶದಲ್ಲೂ ಸಿ.ಸಿ ಟಿ.ವಿ, ಬೆಳಕಿನ ವ್ಯವಸ್ಥೆ ಮಾಡಬೇಕು. ಪ್ರತಿ ಬ್ಯಾಚ್‌ನಲ್ಲೂ 10ಕ್ಕಿಂತ ಹೆಚ್ಚು ಮಹಿಳೆಯರು ಇರಬೇಕು, ಮಹಿಳಾ ಭದ್ರತಾ ಸಿಬ್ಬಂದಿಯನ್ನು ನೇಮಿಸಬೇಕು, ಮನೆಯಿಂದ ಬಂದು ಹೋಗಲು ವಾಹನ ವ್ಯವಸ್ಥೆ ಮಾಡಬೇಕು ಎಂದು ಷರತ್ತು ವಿಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.