ADVERTISEMENT

ಅನುದಾನಿತ ಪಿಯು ಉಪನ್ಯಾಸಕರಿಗೆ ಸಂಕಷ್ಟ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2024, 15:21 IST
Last Updated 6 ನವೆಂಬರ್ 2024, 15:21 IST
   

ಬೆಂಗಳೂರು: ಕಾರ್ಯಭಾರದ ಕೊರತೆ ಇರುವ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿನ ಉಪನ್ಯಾಸಕರನ್ನು ಸರ್ಕಾರಿ ಪಿಯು ಕಾಲೇಜುಗಳಿಗೆ ನೇಮಿಸಬೇಕು ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಮನವಿ ಮಾಡಿದೆ.

ಕಾರ್ಯಭಾರದ ಕೊರತೆ ಇರುವ ಅನುದಾನಿತ ಕಾಲೇಜುಗಳ ಸುಮಾರು 400 ಉಪನ್ಯಾಸಕರಿಗೆ ನಾಲ್ಕು ತಿಂಗಳಿನಿಂದ ವೇತನ ತಡೆ ಹಿಡಿಯಲಾಗಿದೆ. ಅವರ ಬದುಕು ದುಸ್ತರವಾಗಿದೆ. ಶಾಲಾ ಶಿಕ್ಷಣ ಇಲಾಖೆ 2022ರಲ್ಲಿ ಹೊರಡಿಸಿದ ಆದೇಶದಂತೆ ಅವರನ್ನು ಸರ್ಕಾರಿ ಪಿಯು ಕಾಲೇಜುಗಳಿಗೆ ನಿಯೋಜನೆಯನ್ನೂ ಮಾಡುವಂತಿಲ್ಲ. ತಕ್ಷಣ ನಿಯಮಕ್ಕೆ ತಿದ್ದುಪಡಿ ತರಬೇಕು ಎಂದು ಕೋರಿದ್ದಾರೆ.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 4 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ವಾರಕ್ಕೆ ಮೂರು ದಿನ ನಿಯೋಜನೆ ಮಾಡಬೇಕು ಎಂದು ಸಂಘದ ಅಧ್ಯಕ್ಷ ಎ.ಎಚ್‌. ನಿಂಗೇಗೌಡ, ಪ್ರಧಾನ ಕಾರ್ಯದರ್ಶಿ ಶಿವರಾಮ್‌ ಬಿ. ಮಾಲೀಪಾಟೀಲ ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.