ಬೆಂಗಳೂರು: ಆರ್ಥಿಕ ಶಿಸ್ತು ಮತ್ತು ಸಂಪನ್ಮೂಲ ಕ್ರೋಡೀಕರಣಕ್ಕೆ ಒತ್ತು ನೀಡಲು ಹಾಗೂ ತೆರಿಗೆ ವಸೂಲಾತಿಯಲ್ಲಿ ಸುಧಾರಣೆಗಳನ್ನು ತರಲು ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಕರ್ನಾಟಕ ಸರಕು ಮತ್ತು ಸೇವೆಗಳ (ತಿದ್ದುಪಡಿ) ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ, ‘ವ್ಯಾಟ್ ವ್ಯವಸ್ಥೆ ಇದ್ದಾಗ ಕೇವಲ 5.8 ಲಕ್ಷ ತೆರಿಗೆ ಪಾವತಿದಾರರಿದ್ದರು. ಜಿಎಸ್‌ಟಿ ವ್ಯಾಪ್ತಿಯಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿ ಇದ್ದಾರೆ. ಅಡಿಕೆ, ಗುಜರಿ, ಸಿಮೆಂಟ್, ಕ್ರಷರ್‌ಗಳಿಂದ ವ್ಯಾಪಕ ತೆರಿಗೆ ವಂಚನೆ ಯಾಗುತ್ತಿದೆ. ಹೊಸ ಕಾಯ್ದೆ ಈ ಎಲ್ಲ ವಂಚನೆಗಳಿಗೂ ಕಡಿವಾಣ ಹಾಕಲು ನೆರವಾಗಲಿದೆ. ಶೇ 56ರಷ್ಟು ತೆರಿಗೆ ಸೇವಾ ವಲಯದಿಂದ ದೊರೆಯುತ್ತದೆ’ ಎಂದು ವಿಧಾನಸಭೆ, ವಿಧಾನ ಪರಿಷತ್‌ಗೆ ಮನವರಿಕೆ ಮಾಡಿಕೊಟ್ಟಿದ್ದರು.
ಉಭಯ ಸದನಗಳಲ್ಲೂ ಅಂಗೀಕಾರವಾಗಿ ರಾಜ್ಯಪಾಲರ ಸಹಿಗೆ ಕಳುಹಿಸಲಾಗಿತ್ತು. ಈಗ ರಾಜ್ಯಪಾಲರ ಅಂಕಿತದೊಂದಿಗೆ ಮಸೂದೆ ಕಾಯ್ದೆಯ ಸ್ವರೂಪ ಪಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.