ಬೆಂಗಳೂರು: ವಿಧಾನ ಪರಿಷತ್ ಸದಸ್ಯ ರಘುನಾಥ್ ಮಲಕಾಪುರೆ ಅವರನ್ನು ಪರಿಷತ್‌ನ ಹಂಗಾಮಿ ಸಭಾಪತಿಯಾಗಿ ನೇಮಕ ಮಾಡಿ ರಾಜ್ಯಪಾಲ ತಾವರ್‌ಚಂದ್ ಗೆಹಲೋತ್ ಅವರು ಮಂಗಳವಾರ ಆದೇಶಿಸಿದ್ದಾರೆ.
ಮೇಲ್ಮನೆ ಸಭಾಪತಿ ಕಚೇರಿಯ ಕರ್ತವ್ಯಗಳನ್ನು ನಿಭಾಯಿಸುವ ಸಲುವಾಗಿ ಮಲಕಾಪುರೆ ಅವರನ್ನು ನೇಮಿಸಿರುವುದಾಗಿ ರಾಜ್ಯಪಾಲರು ತಮ್ಮ ಆದೇಶದಲ್ಲಿ ಹೇಳಿದ್ದಾರೆ.
ಭಾರತ ಸಂವಿಧಾನದ 184ನೇ ವಿಧಿಯ ಷರತ್ತು (1)ರ ಅನ್ವಯ ಹಂಗಾಮಿ ಸಭಾಪತಿ ನೇಮಕ ಮಾಡಲಾಗಿದ್ದು, ಮೇ 17ರಿಂದಲೇ ಜಾರಿಗೆ ಬರಲಿದೆ. ಸದನವು ಅಧ್ಯಕ್ಷರನ್ನು ನೇಮಕ ಮಾಡುವವರೆಗೆ ಮಲಕಾಪುರೆ ಅವರೇ ಸಭಾಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ಮಲಕಾಪುರೆ ಅವರು ಮಂಗಳವಾರವೇಅಧಿಕಾರ ಸ್ವೀಕರಿಸಿದ್ದು, ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಅವರುಶುಭಕೋರಿದರು.
ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ್ದರಿಂದ, ಹುದ್ದೆ ತೆರವಾಗಿದೆ.
ಮಲ್ಕಾಪುರೆ ವಿಧಾನಪರಿಷತ್ತಿಗೆ ಎರಡನೇ ಬಾರಿಗೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.