ಮಂಡ್ಯ: ‘ರಾಯಚೂರು ಜಿಲ್ಲೆ ಹಟ್ಟಿ ಚಿನ್ನದ ಗಣಿಯಿಂದ ಪ್ರತಿವರ್ಷ 5 ಟನ್ ಚಿನ್ನ ತೆಗೆಯಲು ನಿರ್ಧಾರ ಮಾಡಲಾಗಿದೆ. ಅದಕ್ಕಾಗಿ ಡಿಪಿಆರ್ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಮುರುಗೇಶ ನಿರಾಣಿ ಭಾನುವಾರ ಹೇಳಿದರು.
ಸುದ್ದಿರಾರರೊಂದಿಗೆ ಮಾತನಾಡಿದ ಅವರು ‘ಸದ್ಯ ಹಟ್ಟಿ ಚಿನ್ನದ ಗಣಿಯಲ್ಲಿ ವರ್ಷಕ್ಕೆ 1.5 ಟನ್ ಚಿನ್ನ ತೆಗೆಯಲಾಗುತ್ತಿದೆ. ಅದನ್ನು 5 ಟನ್‌ಗೆ ಹೆಚ್ಚಳ ಮಾಡುವ ಅವಕಾಶ ಇರುವ ಹಿನ್ನೆಲೆಯಲ್ಲಿ ಪ್ರಮಾಣ ಹೆಚ್ಚಳ ಮಾಡಲಾಗುವುದು’ ಎಂದರು.
‘ಚಿನ್ನವನ್ನು ನೇರವಾಗಿ ಮಾರಾಟ ಮಾಡದೇ ಚಿನ್ನದ ನಾಣ್ಯ ತಯಾರಿಸಿ ಆಭರಣೆ ತಯಾರಿಕೆಗೆ ಆದ್ಯತೆ ನೀಡಲಾಗುವುದು. ಬೆಂಗಳೂರಿನ ಖನಿಜ ಭವನದಿಂದಲೇ ಆಭರಣ ಮಳಿಗೆ ಸ್ಥಾಪಿಸಲಾಗುವುದು. ಅದಕ್ಕಾಗಿ ಒಂದು ನಿಗಮ ಸ್ಥಾಪನೆ ಮಾಡಲು ಉದ್ದೇಶಿಸಲಾಗಿದೆ’ ಎಂದರು.
‘ಮುಂದಿನ 2 ವರ್ಷ ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಈ ವಯಸ್ಸಿನಲ್ಲೂ ಅವರು 24X 7 ಕೆಲಸ ಮಾಡುತ್ತಿದ್ದಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.