ADVERTISEMENT

310 ಪದವಿ ಕಾಲೇಜುಗಳಿಗೆ ಪ್ರಾಚಾರ್ಯರ ನೇಮಕ: ಸಚಿವ ಡಾ. ಸಿ.ಎನ್‌.ಅಶ್ವತ್ಥನಾರಾಯಣ

ಹುದ್ದೆ ಭರ್ತಿಗೆ ಸರ್ಕಾರದ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2019, 19:58 IST
Last Updated 10 ಸೆಪ್ಟೆಂಬರ್ 2019, 19:58 IST
ಡಾ. ಸಿ.ಎನ್. ಅಶ್ವತ್ಥನಾರಾಯಣ
ಡಾ. ಸಿ.ಎನ್. ಅಶ್ವತ್ಥನಾರಾಯಣ   

ಬೆಂಗಳೂರು: ರಾಜ್ಯದ 310 ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಂಶುಪಾಲರನ್ನು ನೇಮಕ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್‌. ಅಶ್ವತ್ಥನಾರಾಯಣ ಹೇಳಿದರು.

ನೇರ ನೇಮಕಾತಿ ಹಾಗೂ ಆನ್‌ಲೈನ್‌ ಪರೀಕ್ಷೆ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

ಈ ಹಿಂದಿನ ಸರ್ಕಾರ ನೀಡಿದ ಒಪ್ಪಿಗೆಯನ್ನು ನಾವು ಪೂರ್ಣಗೊಳಿಸಲಿದ್ದು, ನೇಮಕಾತಿಯನ್ನು ಪಾರದರ್ಶಕವಾಗಿ ನಡೆಸಲಾಗುವುದು. ಈಗಾಗಲೇ ನೀಡಲಾದ ಆದೇಶದಂತೆ 2019–20ನೇ ಸಾಲಿನಲ್ಲಿ 155 ಪ್ರಾಂಶುಪಾಲರನ್ನು ಹಾಗೂ 2020–21ರಲ್ಲಿ 155 ಪ್ರಾಂಶುಪಾಲರನ್ನು ನೇಮಕ ಮಾಡಲಾಗುವುದು ಎಂದರು.

ADVERTISEMENT

ಕ್ಯಾಂಪಸ್‌ಗಳಲ್ಲಿ ಚುನಾವಣೆ: ವಿಶ್ವವಿದ್ಯಾಲಯಗಳ ಕ್ಯಾಂಪಸ್‌ನೊಳಗೆ ಮತ್ತೆ ವಿದ್ಯಾರ್ಥಿ ಚುನಾವಣೆ ಜಾರಿಗೆ ತರುವ ಇಂಗಿತವನ್ನು ಸಚಿವರು ವ್ಯಕ್ತಪಡಿಸಿದರು. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧರಿತ ಕಲಹಗಳಿಗೆ ಕಾರಣವಾಗುತ್ತದೆ ಎಂಬ ಕಾರಣಕ್ಕೆ1989–90ನೇ ಸಾಲಿನಿಂದ ಈ ಚುನಾವಣೆಗಳನ್ನು ನಿಷೇಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.