ADVERTISEMENT

ಮೈಸೂರು | ಅತಿಥಿ ಗೃಹದ ಬಾಗಿಲಿಗೆ ಬೀಗ: ಕೇಂದ್ರ ಸಚಿವ ಕುಮಾರಸ್ವಾಮಿಗೆ ಮುಜುಗರ

​ಪ್ರಜಾವಾಣಿ ವಾರ್ತೆ
Published 28 ಜುಲೈ 2024, 8:51 IST
Last Updated 28 ಜುಲೈ 2024, 8:51 IST
<div class="paragraphs"><p>ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ‌ ಶ್ರೀಕಂಠೇಶ್ವರ ದೇವಾಲಯದಲ್ಲಿ ಭಾನುವಾರ ವಿಶೇಷ ಪೂಜೆ ಸಲ್ಲಿಸಿದರು</p></div>

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ‌ ಶ್ರೀಕಂಠೇಶ್ವರ ದೇವಾಲಯದಲ್ಲಿ ಭಾನುವಾರ ವಿಶೇಷ ಪೂಜೆ ಸಲ್ಲಿಸಿದರು

   

ಮೈಸೂರು: ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ‌. ಕುಮಾರಸ್ವಾಮಿ ಅವರು ಲಘು ವಿಶ್ರಾಂತಿ ಪಡೆಯಲೆಂದು ಹೋಗಿದ್ದಾಗ ಸರ್ಕಾರಿ ಅತಿಥಿ ಗೃಹದ ಬಾಗಿಲು ಹಾಕಿದ್ದ ಘಟನೆ ಭಾನುವಾರ ನಡೆದಿದೆ. ಇದರಿಂದ ಸಚಿವರು ಮುಜುಗರ ಅನುಭವಿಸಿದರು.

ನಂಜನಗೂಡು ಪಟ್ಟಣದ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲು ಅವರು ಬಂದಿದ್ದರು.‌ ಅತಿಥಿ ಗೃಹದಲ್ಲಿ ಕೊಂಚ ಸಮಯ ವಿಶ್ರಾಂತಿ ಪಡೆಯಲು ಬಯಸಿದ್ದರು. ಅಲ್ಲಿಗೆ ಹೋದಾಗ ಬೀಗ ಹಾಕಿರುವುದು ಕಂಡುಬಂತು. ಸ್ವಲ್ಪ ಹೊತ್ತು ಕಾದರೂ ಸಿಬ್ಬಂದಿ ಯಾರೂ ಬರಲಿಲ್ಲ. ಇದರಿಂದಾಗಿ ಅವರು ಅಲ್ಲಿಂದ ಮರಳಿದರು.

ADVERTISEMENT

ಈ ಮೂಲಕ ಸರ್ಕಾರವು ಕೇಂದ್ರ ಸಚಿವರಿಗೆ ಅವಮಾನ ಮಾಡಿದೆ. ಪ್ರವಾಸ ಕಾರ್ಯಕ್ರಮದ ಪಟ್ಟಿಯನ್ನು ಮುಂಚಿತವಾಗಿಯೇ ಅಧಿಕಾರಿಗಳಿಗೆ ತಿಳಿಸಿದ್ದರೂ ಪೂರ್ವ ಸಿದ್ಧತೆಯನ್ನು ಮಾಡಿಕೊಂಡಿಲ್ಲ. ಶಿಷ್ಟಾಚಾರ ಪಾಲಿಸಿಲ್ಲ. ಅವರು ಅತಿಥಿ ಗೃಹದ ಬಳಿಗೆ ಬಂದಾಗಲೂ ಸರ್ಕಾರಿ ಅಧಿಕಾರಿಗಳ್ಯಾರೂ ಇರಲಿಲ್ಲ ಎಂದು ಜೆಡಿಎಸ್ ಮುಖಂಡರು ‌ದೂರಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ,‌ ‘ವಿಷಯ ಗಮನಕ್ಕೆ ಬಂದಿದ್ದು ಗಂಭೀರವಾಗಿ ಪರಿಗಣಿಸಿ ‌ವಿಚಾರಣೆ ಮಾಡಲಾಗುತ್ತಿದೆ. ಕರ್ತವ್ಯ ಲೋಪದಡಿ ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.