ಬೆಂಗಳೂರು: ‘ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ನೀಡಿದ್ದ ಭರವಸೆ ಅನುಸಾರ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸಿಲ್ಲ’ ಎಂದು ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.
ಈ ಕುರಿತಂತೆ ಆಯೋಗ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು, ‘ಅರ್ಜಿಗೆ ಸಂಬಂಧಿಸಿದಂತೆ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಅದಕ್ಕಾಗಿ ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.