ಬೆಂಗಳೂರು: ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಎಂಟು ವರ್ಷಗಳಿಂದ ಜಿ.ಪರಮೇಶ್ವರಅವರ ಸಹಾಯಕನಾಗಿ ರಮೇಶ್‌ಕೆಲಸ ಮಾಡುತ್ತಿದ್ದರು. ಅವರು ಬೆಳಿಗ್ಗೆ ಆಪ್ತರಿಗೆ ಕರೆ ಮಾಡಿ ಜ್ಞಾನ ಭಾರತಿ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಮೇಶ್ ಕೆಪಿಸಿಸಿ ಕಚೇರಿಯಲ್ಲಿ ಬೆರಳಚ್ಚುಗಾರನಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.
ಪರಮೇಶ್ವರ ಅವರ ನಿವಾಸ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆಐಟಿ ಅಧಿಕಾರಿಗಳು ದಾಳಿ ನಡೆಸಿದ್ದ ಬೆನ್ನಲೇರಮೇಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳನ್ನು ಸೃಷ್ಟಿಸಿದೆ.
‘ಒಳ್ಳೆಯ ಹುಡುಗ, ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದರು. ಬಹಳ ವರ್ಷಗಳಿಂದ ನನ್ನೊಂದಿಗೆ ಕೆಲಸ ಮಾಡುತ್ತಿದ್ದ. ಬೆಳಿಗ್ಗೆ ಮಾತನಾಡಿ ಧೈರ್ಯ ಹೇಳಿ ಕಳುಹಿಸಿದ್ದೆ. ಆದರೆ, ಈ ರೀತಿ ಏಕೆ ಮಾಡಿಕೊಂಡ ತಿಳಿಯುತ್ತಿಲ್ಲ...’ಎಂದು ರಮೇಶ್ ಕುರಿತುಡಾ.ಜಿ.ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.
ನೀಟ್ ಪರೀಕ್ಷೆ ಮೂಲಕ ಭಾರತ ವೈದ್ಯಕೀಯ ಮಂಡಳಿ ಹಂಚಿಕೆ ಮಾಡಿದ್ದ ಸೀಟುಗಳನ್ನು ಅಕ್ರಮವಾಗಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರಾದ ಪರಮೇಶ್ವರ ಅವರಿಗೆ ಸೇರಿದ ಸಿದ್ಧಾರ್ಥ ಶಿಕ್ಷಣ ಟ್ರಸ್ಟ್ ಹಾಗೂ ಆರ್. ಎಲ್. ಜಾಲಪ್ಪ ಅವರ ದೇವರಾಜ ಅರಸು ಶಿಕ್ಷಣ ಸಂಸ್ಥೆ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಅಧಿಕಾರಿಗಳು ಲೆಕ್ಕ ಕೊಡದ ಭಾರಿ ಆಸ್ತಿ ಪಾಸ್ತಿ ಪತ್ತೆ ಹಚ್ಚಿದ್ದಾರೆ.
ಆತ್ಮಹತ್ಯೆಗೆ ಐಟಿ ಇಲಾಖೆಯ ಕಿರುಕುಳ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.