ADVERTISEMENT

ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2019, 20:15 IST
Last Updated 12 ಡಿಸೆಂಬರ್ 2019, 20:15 IST
   

ಬೆಂಗಳೂರು: ಪ್ರಸಕ್ತ ಸಾಲಿಗೆ ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ, ಜೋಳ ಖರೀದಿ ಮಾಡಲು ಸರ್ಕಾರ ಗುರುವಾರ ನಿರ್ಧರಿಸಿದೆ.

ಪ್ರತಿ ರೈತರಿಂದ 40 ಕ್ವಿಂಟಲ್ ಭತ್ತ, 75 ಕ್ವಿಂಟಲ್ ರಾಗಿ, 75 ಕ್ವಿಂಟಲ್ ಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲಾಗುತ್ತದೆ. 2020 ಜನವರಿ 1ರಿಂದ ಮಾರ್ಚ್ 31ರ ವರೆಗೆ ಖರೀದಿಗೆ ಸಮಯ ನಿಗದಿಪಡಿಸಲಾಗಿದೆ. 1.75 ಲಕ್ಷ ಮೆಟ್ರಿಕ್ ಟನ್ ಭತ್ತ, 2 ಲಕ್ಷ ಮೆಟ್ರಿಕ್ ಟನ್ ರಾಗಿ, 1241 ಮೆಟ್ರಿಕ್ ಟನ್ ಜೋಳ ಖರೀದಿಸಲಾಗುತ್ತದೆ.

ಆಯಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಲಾಗುತ್ತದೆ. ಈ ಸಮಿತಿಯು ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ತೆರೆಯಲಿದೆ. ಸೋಯಾಬೀನ್ ಉತ್ಪನ್ನವನ್ನೂ ರಾಜ್ಯ ಮಾರ್ಕೇಟಿಂಗ್ ಫೆಡರೇಷನ್ ಮೂಲಕ ಖರೀದಿಸಲು ಒಪ್ಪಿಗೆ ನೀಡಲಾಗಿದೆ. ಆದರೆ ದರ ನಿಗದಿಪಡಿಸಿಲ್ಲ. ಶೇಂಗಾ, ತೊಗರಿ ಉತ್ಪನ್ನಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ನಿರ್ಧರಿಸಲಾಗಿದೆ.

ADVERTISEMENT

ಕೃಷಿ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಕೆ.ಎಸ್.ಈಶ್ವರಪ್ಪ, ಬಸವರಾಜ ಬೊಮ್ಮಾಯಿ, ಪ್ರಭು ಚವ್ಹಾಣ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.