ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರು ತಮ್ಮ ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆಸುತ್ತಿದ್ದು, ಮುಖ್ಯಮಂತ್ರಿ ಮಧ್ಯಪ್ರವೇಶ ಮಾಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
ಗ್ರಾಮ ಪಂಚಾಯತ್‌ಗಳ 11 ವೃಂದಗಳ ನೌಕರರು ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ರಾಜ್ಯದಾದ್ಯಂತ ಗ್ರಾಮ ಪಂಚಾಯಯಿತಿ ಸೇವೆ ಸ್ಥಗಿತಗೊಂಡಿದೆ. ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಗಮನಿಸಿ ಸಮಸ್ಯೆಯನ್ನು ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿದ್ದಾರೆ.
ಪಿಡಿಒಗಳು ಸೇರಿ ಎಲ್ಲ ನೌಕರ ವೃಂದದವರು ನಾಲ್ಕನೇ ಬಾರಿ ಮುಷ್ಕರ ನಿರತರಾಗಿದ್ದು, ಮೂರು ಬಾರಿ ನಡೆಸಿದ ಸಭೆಯ ನಿರ್ಣಯಗಳು ಈಡೇರಿಲ್ಲ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. 28 ಬೇಡಿಕೆಗಳನ್ನು ಸಂಘ ಸರ್ಕಾರದ ಮುಂದಿಟ್ಟಿತ್ತು. ಸರ್ಕಾರ ಒಂದೂ ಬೇಡಿಕೆ ಈಡೇರಿಸಿಲ್ಲ ಎಂಬ ಆಕ್ಷೇಪವಿದೆ ಎಂದು ಹೇಳಿದ್ದಾರೆ.
ಇದೇ 11ರಿಂದ ತೀವ್ರ ಹೋರಾಟ ನಡೆಸುವುದಾಗಿ ಪಂಚಾಯಯಿತಿ ನೌಕರರು ಗಡುವು ನೀಡಿದ್ದಾರೆ. ಹೋರಾಟ ತೀವ್ರಗೊಂಡರೆ ವಾಟರ್‌ಮನ್, ಕಂಪ್ಯೂಟರ್ ಸೇವೆಯೂ ಸ್ಥಗಿತವಾಗಲಿದೆ. ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆಗಳು ಉಲ್ಬಣಿಸಲಿವೆ. , ಸರ್ಕಾರವು ನೌಕರರ ಬೇಡಿಕೆಗಳನ್ನು ಚರ್ಚಿಸಿ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.