ADVERTISEMENT

ಮಹಿಳಾ ಇಲಾಖೆಗೆ ಅನುದಾನ: ಕೇಂದ್ರಕ್ಕೆ ಹೆಬ್ಬಾಳಕರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2024, 15:39 IST
Last Updated 29 ಅಕ್ಟೋಬರ್ 2024, 15:39 IST
ಲಕ್ಷ್ಮೀ ಹೆಬ್ಬಾಳಕರ
ಲಕ್ಷ್ಮೀ ಹೆಬ್ಬಾಳಕರ   

ನವದೆಹಲಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಅನಿಲ್ ಮಲಿಕ್ ಅವರನ್ನು ಇಲ್ಲಿ ಭೇಟಿಯಾಗಿ ಇಲಾಖೆಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

ಅನುದಾನ, ಅಕ್ಕಿ, ಗೋಧಿ ಪೂರೈಕೆ, ಹೊಸ ತಾಲ್ಲೂಕುಗಳ ಸಿಡಿಪಿಓ ಕಚೇರಿ, ಕಾರ್ಯನಿರತ ಮಹಿಳಾ ವಸತಿ ನಿಲಯ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು. 

‌ನಂತರ, ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಅಮಿತ್ ಯಾದವ್ ಅವರನ್ನು ಭೇಟಿ ಮಾಡಿದ ಸಚಿವರು, ನಶಾ ಮುಕ್ತ ಭಾರತ ಯೋಜನೆಯ ಕುರಿತು ಸಮಾಲೋಚಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.