ADVERTISEMENT

‘ಗೃಹ ಆರೋಗ್ಯ’ ಯೋಜನೆಗೆ ಚಾಲನೆ: ಮನೆ ಬಾಗಿಲಿನಲ್ಲಿಯೇ ಆರೋಗ್ಯ ತಪಾಸಣೆ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 16:05 IST
Last Updated 23 ಅಕ್ಟೋಬರ್ 2024, 16:05 IST
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್   

ಬೆಂಗಳೂರು: ಮನೆ ಬಾಗಿಲಿನಲ್ಲಿಯೇ ಆರೋಗ್ಯ ತಪಾಸಣೆ ನಡೆಸಿ, ಮಾತ್ರೆಗಳನ್ನು ವಿತರಿಸುವ ಆರೋಗ್ಯ ಇಲಾಖೆಯ ‘ಗೃಹ ಆರೋಗ್ಯ’ ಯೋಜನೆಗೆ ಗುರುವಾರ ಚಾಲನೆ ಸಿಗಲಿದೆ.

ವಿಧಾನಸೌಧದ ಬ್ಯಾಕ್ವೆಂಟ್‌ ಹಾಲ್‌ನಲ್ಲಿ ಇಲಾಖೆಯು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಜೆ 4 ಗಂಟೆಗೆ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಸಾಂಕ್ರಾಮಿಕವಲ್ಲದ ರೋಗಗಳನ್ನು ಹತೋಟಿಗೆ ತರುವುದು ಯೋಜನೆಯ ಮುಖ್ಯ ಗುರಿಯಾಗಿದೆ. ಮೊದಲ ಹಂತದಲ್ಲಿ ಕೋಲಾರ ಜಿಲ್ಲೆಯಲ್ಲಿ ಯೋಜನೆ ಅನುಷ್ಠಾನವಾಗಲಿದ್ದು, ಜನವರಿ ತಿಂಗಳಲ್ಲಿ ರಾಜ್ಯದಾದ್ಯಂತ ವಿಸ್ತರಣೆಯಾಗಲಿದೆ. ಮಧುಮೇಹ, ಅಧಿಕ ರಕ್ತದೊತ್ತಡ, ಬಾಯಿ, ಗರ್ಭಕಂಠ ಹಾಗೂ ಸ್ತನ ಕ್ಯಾನ್ಸರ್ ಪತ್ತೆಗೆ ಯೋಜನೆಯಡಿ ತಪಾಸಣೆ ನಡೆಸಲಾಗುತ್ತದೆ. ಸಮಸ್ಯೆ ಇರುವವರಿಗೆ ಅಗತ್ಯ ಮಾತ್ರೆಗಳನ್ನೂ ಒದಗಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. 

ADVERTISEMENT

‘ಸಮುದಾಯ ಆರೋಗ್ಯಾಧಿಕಾರಿಗಳು, ಪ್ರಾಥಮಿಕ ಸುರಕ್ಷಾಣಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರನ್ನು ಒಳಗೊಂಡ ತಂಡಗಳು ಪ್ರತಿ ಮನೆಗೆ ಭೇಟಿ ನೀಡಿ, 30 ವರ್ಷ ಮೇಲ್ಪಟ್ಟ ವಯಸ್ಸಿನವರಿಗೆ ಆರೋಗ್ಯ ತಪಾಸಣೆ ನಡೆಸಲಿವೆ. ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ ಈ ತಪಾಸಣೆ ನಡೆಯಲಿದ್ದು, ದಿನಕ್ಕೆ ತಲಾ 15 ಮನೆಗಳಿಗೆ ತಂಡಗಳು ಭೇಟಿ ನೀಡಿ ತಪಾಸಣೆ ಕಾರ್ಯ ನಡೆಸಲಿವೆ’ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.