ADVERTISEMENT

‘ಗ್ಯಾರಂಟಿ ಯೋಜನೆ: ವ್ಯತಿರಿಕ್ತ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು‘

​ಪ್ರಜಾವಾಣಿ ವಾರ್ತೆ
Published 9 ಜೂನ್ 2024, 15:34 IST
Last Updated 9 ಜೂನ್ 2024, 15:34 IST
ದಿನೇಶ ಗೂಳಿಗೌಡ
ದಿನೇಶ ಗೂಳಿಗೌಡ   

ಬೆಂಗಳೂರು: ‘ಕಾಂಗ್ರೆಸ್ ‌ಸರ್ಕಾರದ‌ ಮಹತ್ವಾಕಾಂಕ್ಷೆಯ ‘ಗ್ಯಾರಂಟಿ’ ಯೋಜನೆಗಳ ಕುರಿತು ಪಕ್ಷದ ಕೆಲವು ನಾಯಕರು, ಶಾಸಕರು, ಸಚಿವರು ನೀಡುತ್ತಿರುವ ವ್ಯತಿರಿಕ್ತ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ದಿನೇಶ ಗೂಳಿಗೌಡ ಪತ್ರ ಬರೆದಿದ್ದಾರೆ.

‘ಗ್ಯಾರಂಟಿ ಯೋಜನೆಗಳು ಈಗ ದೇಶಕ್ಕೇ ಮಾದರಿಯಾದ ಕ್ರಾಂತಿಕಾರಿ ಯೋಜನೆಗಳಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ ₹ 2 ಸಾವಿರ, ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆ, ಬೆಲೆ ಏರಿಕೆಯಿಂದ ಜನರು ತತ್ತರಿಸುತ್ತಿರುವ ದಿನದಲ್ಲಿ ‘ಗೃಹ ಜ್ಯೋತಿ’ ಯೋಜನೆ‌ ಬಡವರಿಗೆ ಊರುಗೋಲಾಗಿದೆ. ಈ ಯೋಜನೆಗಳಿಂದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಪಕ್ಷ ಮತ ಗಳಿಕೆ ಗಣನೀಯವಾಗಿ ಹೆಚ್ಚಳವಾಗಿದೆ. ಇದು ಕಾಂಗ್ರೆಸ್ ಬಗ್ಗೆ ಜನರು ಇಟ್ಟಿರುವ ನಂಬಿಕೆಯನ್ನು ತೋರಿಸುತ್ತದೆ’ ಎಂದಿದ್ದಾರೆ.

‘ಬಡವರ ಪರವಾದ ಈ ಯೋಜನೆಗಳನ್ನು ಸ್ಥಗಿತಗೊಳಿಸುವುದಿರಲಿ, ಅಂಥ ಹೇಳಿಕೆಗಳಿಂದಲೂ ಪಕ್ಷದ ಮೇಲಿನ ವಿಶ್ವಾಸ ಕಡಿಮೆಯಾಗುತ್ತದೆ. ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದರಿಂದ ಅಂಥ ಹೇಳಿಕೆಗಳಿಗೆ ತಕ್ಷಣ ಕಡಿವಾಣ ಹಾಕಬೇಕು’ ಎಂದು ಪತ್ರದಲ್ಲಿ ಅವರು ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.