ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಮುಂದಿನ ಆದೇಶದವರೆಗೆ ಕರ್ತವ್ಯದಿಂದ ಬಿಡುಗಡೆಗೊಳಿಸಬಾರದೆಂದು ಕಾಲೇಜು ಶಿಕ್ಷಣ ಇಲಾಖೆ ಸೂಚಿಸಿದೆ.
ಅತಿಥಿ ಉಪನ್ಯಾಸಕರನ್ನು ಡಿ.31ರಂದು ಬಿಡುಗಡೆಗೊಳಿಸುವಂತೆ ಇಲಾಖೆ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು. ಈ ಕುರಿತು ‘ಪ್ರಜಾವಾಣಿ’ ಡಿ. 30ರಂದು ವಿಶೇಷ ವರದಿ ಪ್ರಕಟಿಸಿತ್ತು. ಇದಾದ ನಂತರ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಡಿ.31ರಂದು ವ್ಯಾಟ್ಸ್ ಆ್ಯಪ್ ಸಂದೇಶ ಮೂಲಕ ಅತಿಥಿ ಉಪನ್ಯಾಸಕರನ್ನು ಬಿಡುಗಡೆಗೊಳಿಸದಂತೆ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.