ADVERTISEMENT

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಅರ್ಜಿ ಕರೆದಿರಲಿಲ್ಲ: ಎಚ್ ಆಂಜನೇಯ

ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2022, 13:28 IST
Last Updated 21 ಆಗಸ್ಟ್ 2022, 13:28 IST
ಎಚ್.ಆಂಜನೇಯ
ಎಚ್.ಆಂಜನೇಯ   

ಚಿತ್ರದುರ್ಗ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಅರ್ಜಿ ಕರೆದಿರಲಿಲ್ಲ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷರಾಗಿರುವ ವೀರಶೈವ ಲಿಂಗಾಯತ ಮಹಾಸಭಾ ಈ ಬೇಡಿಕೆ ಇಟ್ಟಿತ್ತು. ಅಧಿಕಾರದಲ್ಲಿದ್ದ ಸರ್ಕಾರ ಇದಕ್ಕೆ ಸ್ಪಂದಿಸಿದ್ದು ಸತ್ಯ ಎಂದು ಮಾಜಿ ಸಚಿವ ಎಚ್‌.ಆಂಜನೇಯ ತಿಳಿಸಿದರು.

‘ಸಚಿವ ಸಂಪುಟದ ಮುಂದೆ ಈ ವಿಷಯ ಪ್ರಸ್ತಾಪವಾಗಿತ್ತು. ಪ್ರತ್ಯೇಕ ಧರ್ಮದಿಂದ ವಿಶೇಷ ಸೌಲಭ್ಯ ಸಿಗುವ ಸಾಧ್ಯತೆ ಇರುವುದರಿಂದ ಹಾಗೂ ಶೈಕ್ಷಣಿಕ, ಔದ್ಯೋಗಿಕ ಕಲ್ಯಾಣಕ್ಕೆ ಅನುಕೂಲವಾಗುವುದರಿಂದ ಒಲವು ತೋರಲಾಯಿತು. ಈ ನಿರ್ಧಾರದಿಂದ ಕಾಂಗ್ರೆಸ್‌ಗೆ ತೊಂದರೆ ಆಗಿಲ್ಲ. ಇದೊಂದು ಮುಗಿದು ಹೋದ ಅಧ್ಯಾಯ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ಪ್ರತ್ಯೇಕ ಧರ್ಮಕ್ಕೆ ಮಾತೆ ಮಹಾದೇವಿ ದಶಕಗಳಿಂದ ಹೋರಾಟ ನಡೆಸುತ್ತಿದ್ದರು. ಗದಗಿನ ತೋಂಟದಾರ್ಯ ಸ್ವಾಮೀಜಿ, ಇಳಕಲ್‌ ಮಹಾಂತ ಸ್ವಾಮೀಜಿ, ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪ್ರತ್ಯೇಕ ಧರ್ಮ ಪ್ರತಿಪಾದಿಸಿದರು. ಪಂಚಪೀಠದ ಗುರುಗಳು ಮಾತ್ರ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರತ್ಯೇಕ ಧರ್ಮ ಆ ಸಮುದಾಯಕ್ಕೆ ಬಿಟ್ಟ ವಿಚಾರ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.