ಬೆಂಗಳೂರು: ನೀರಾವರಿ ಇಲಾಖೆಯ ವಿವಿಧ ಕಾಮಗಾರಿಗಳಿಗೆ ತರಾತುರಿಯಲ್ಲಿ ಟೆಂಡರ್ ಕರೆದು ಒಪ್ಪಿಗೆ ನೀಡಲಾಗಿದೆ. ಇದರಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದ ಅವರು, ‘ಭದ್ರಾ ಮೇಲ್ದಂಡೆ ಮತ್ತು ಕಾವೇರಿ ನೀರಾವರಿ ನಿಗಮದಲ್ಲಿ ಅಕ್ರಮ ನಡೆದಿದೆ. ಸುಮಾರು ₹20 ಸಾವಿರ ಕೋಟಿ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ. ಗುತ್ತಿಗೆದಾರರಿಂದ ಹಣ ಪಡೆಯಲಾಗಿದೆ’ ಎಂದು ಅವರು ಮುಖ್ಯಮಂತ್ರಿ ವಿರುದ್ಧ ಹರಿಹಾಯ್ದರು.
ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಂದ ಆಡಳಿತದಲ್ಲಿ ಹಸ್ತಕ್ಷೇಪ ನಡೆದಿದೆ. ಎಲ್ಲಾ ಇಲಾಖೆಗಳಲ್ಲೂ ಮೂಗು ತೂರಿಸುತ್ತಾರೆ. ಅವರ ವಿರುದ್ಧ ಜಾರಿ ನಿರ್ದೇಶನಾಲಯದ ಪ್ರಕರಣ ಇದೆ. ಅದಕ್ಕಾಗಿ ಅವರು ಆಗ್ಗಾಗ್ಗೆ ದೆಹಲಿಗೆ ಹೋಗುತ್ತಿದ್ದಾರೆ. ಈ ಹಿಂದೆ ಯಡಿಯೂರಪ್ಪ ಅವರು ಮಕ್ಕಳಿಂದ ಜೈಲಿಗೆ ಹೋಗಿದ್ದರು. ಎರಡನೇ ಬಾರಿ ಅಂತಹ ಸ್ಥಿತಿ ಬರಬಾರದು ಎಂದು ವಿಶ್ವನಾಥ್ ಹೇಳಿದರು.
ಇದನ್ನೂ ಓದಿ... ರಾಜಕೀಯದಲ್ಲಿ ಯಾವುದೇ ಗೊಂದಲ ಇಲ್ಲ: ಬಿ.ಎಸ್.ಯಡಿಯೂರಪ್ಪ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.