ಬೆಂಗಳೂರು: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ಹುಣಸೂರುಕ್ಷೇತ್ರದ ಶಾಸಕ ಅಡಗೂರು ಎಚ್. ವಿಶ್ವನಾಥ್ ಅವರು ನೇಮಕವಾಗಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಸಮ್ಮುಖದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖರಸಭೆಯಲ್ಲಿ ನೂತನ ಅಧ್ಯಕ್ಷ ಹಾಗೂ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆಎಂದು ಮೂಲಗಳು ತಿಳಿಸಿವೆ.
ರಾಜ್ಯ ಘಟಕದ ಅಧ್ಯಕ್ಷರಾಗಿದ್ದಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದ ಬಳಿಕ, ಪಕ್ಷದ ಸಂಘಟನೆಗೆ ಓಡಾಡಲು ಸಮಯ ಸಿಗುತ್ತಿಲ್ಲ. ಈ ಕಾರಣದಿಂದ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ದೇವೇಗೌಡರೇ ಪ್ರತಿಪಾದಿಸಿದ್ದರು.
ಕುರುಬ ಸಮುದಾಯದ ಪ್ರಮುಖ ನಾಯಕರೂ ಆಗಿರುವ ವಿಶ್ವನಾಥ್ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದರು. ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ಗೆ ಕರೆತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದ ವಿಶ್ವನಾಥ್, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.