ADVERTISEMENT

ಸರ್ಕಾರಿ ಕ್ಷೌರದಂಗಡಿ ಪ್ರಾರಂಭಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2020, 20:33 IST
Last Updated 22 ನವೆಂಬರ್ 2020, 20:33 IST

ಬೆಂಗಳೂರು: ‘ಗ್ರಾಮಪಂಚಾಯಿತಿ ಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾದ ಸರ್ಕಾರಿ ಕ್ಷೌರದಂಗಡಿಗಳನ್ನು ತೆರೆದು, ತುಳಿತಕ್ಕೆ ಒಳಗಾಗಿರುವ ಈ ವರ್ಗದ ಜನರ ಹಿತಾಸಕ್ತಿ ಕಾಪಾಡಬೇಕು’ ಎಂದು ಕರ್ನಾಟಕ ರಾಜ್ಯ ಕ್ಷೌರಿಕರ ಮೀಸಲಾತಿ ಒಕ್ಕೂಟದ ಅಧ್ಯಕ್ಷ ಎಂ.ಬಿ. ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.

‘ಸ್ವಾತಂತ್ರ್ಯ ಪೂರ್ವದಿಂದಲೂ ದಲಿತರು ಮತ್ತು ಇತರೆ ಹಿಂದುಳಿದ ವರ್ಗದವರು ಮೇಲ್ವರ್ಗದ ದೌರ್ಜನ್ಯಕ್ಕೆ ತುತ್ತಾಗುತ್ತಾ ಬಂದಿದ್ದಾರೆ. ಅವರಿಗೆ ಸಮಾಜದಲ್ಲಿ ಗೌರವ ಇಲ್ಲದಂತಾಗಿದ್ದು, ಕ್ಷೌರ ಮಾಡಲೂ ನಿರಾಕರಿಸುವಂತಹ ಘಟನೆಗಳು ಈಗಲೂ ನಡೆಯುತ್ತಿವೆ. ಗ್ರಾಮಾಂತರ ಪ್ರದೇಶದಲ್ಲಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸುತ್ತಿರುವುದು ವಿಷಾದನೀಯ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT