ADVERTISEMENT

Photos | ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲೆ ವಿಸರ್ಜನೆ: ಹರಿದು ಬಂದ ಭಕ್ತರ ದಂಡು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಡಿಸೆಂಬರ್ 2023, 5:03 IST
Last Updated 24 ಡಿಸೆಂಬರ್ 2023, 5:03 IST
<div class="paragraphs"><p>ಗಂಗಾವತಿ<strong>&nbsp;</strong>ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ&nbsp; ಇಂದು&nbsp;ಹನುಮಮಾಲೆ ವಿಸರ್ಜನೆ ನಡೆಯಲಿದೆ.&nbsp;&nbsp;</p></div>

ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ  ಇಂದು ಹನುಮಮಾಲೆ ವಿಸರ್ಜನೆ ನಡೆಯಲಿದೆ.  

   

ಹನುಮಮಾಲೆ ವಿಸರ್ಜನೆ ಅಂಗವಾಗಿ ಶನಿವಾರ ಮಧ್ಯರಾತ್ರಿಯೇ ಅಂಜನಾದ್ರಿ ಬೆಟ್ಟದಲ್ಲಿರುವ ಹನುಮನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ತರಹೇವಾರಿ ಬಣ್ಣದ ಹೂಗಳಿಂದ ಮೂರ್ತಿಯನ್ನು ಅಲಂಕಾರ ಮಾಡಲಾಗಿದೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ.

ADVERTISEMENT

ಮಾಲೆ ವಿಸರ್ಜನೆ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರಿಂದ ಬಿಗಿ ಪೊಲೀಸ್ ಬಂದೋಬಸ್ತ್  ವ್ಯವಸ್ಥೆ ಮಾಡಲಾಗಿದೆ.

ಶನಿವಾರ ಸಂಜೆಯಿಂದಲೇ ಭಕ್ತರು ಪಾದಯಾತ್ರೆ ಮೂಲಕ ಅಂಜನಾದ್ರಿಯತ್ತ ಸಾಗಿ ಬಂದಿದ್ದಾರೆ.

ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದ್ದಂತೆಯೇ ಇಲ್ಲಿಗೆ ಬರುವ ಭಕ್ತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೊರರಾಜ್ಯ ಮತ್ತು ಹೊರಜಿಲ್ಲೆಗಳಿಂದಲೂ ಅಪಾರ ಸಂಖ್ಯೆಯಲ್ಲಿ ಭಕ್ತರು ಅಂಜನಾದ್ರಿಗೆ ಬರುತ್ತಿದ್ದಾರೆ.

ಪೂರ್ಣ ಬೆಟ್ವವನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಿರುವುದು.

ಹನುಮನ ಹೆಸರಿನಲ್ಲಿ ತಮ್ಮ ಶಕ್ತಿಯನುಸಾರ ಭಕ್ತರು 5, 11 ಹಾಗೂ 21 ದಿನಗಳ ಕಾಲ ವ್ರತದ ಸಂಕಲ್ಪ ಮಾಡಿ ತುಳಸಿ ಮಾಲೆ ಧರಿಸುತ್ತಾರೆ. ವ್ರತ ಪೂರ್ಣಗೊಳಿಸಿ ಅಂಜನಾದ್ರಿಯಲ್ಲಿ ಮಾಲೆ ವಿಸರ್ಜನೆ ಮಾಡುವ ಸಂಪ್ರದಾಯ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.