ADVERTISEMENT

ಹರಿಹರ: ಹರ ಜಾತ್ರಾ ಮಹೋತ್ಸವ 14ರಿಂದ

​ಪ್ರಜಾವಾಣಿ ವಾರ್ತೆ
Published 10 ಜನವರಿ 2020, 10:16 IST
Last Updated 10 ಜನವರಿ 2020, 10:16 IST

ಬೆಂಗಳೂರು: ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ಹರಿಹರದಲ್ಲಿ ಜ. 14 ಮತ್ತು 15ರಂದು ಪ್ರಥಮ ಹರ ಜಾತ್ರಾ ಮಹೋತ್ಸವ, ಅಕ್ಕಮಹಾದೇವಿ ವಚನ ವಿಜಯೋತ್ಸವ ಮತ್ತು ಮಹಿಳಾ ಸಮಾವೇಶಗಳನ್ನು ಏರ್ಪಡಿಸಲಾಗಿದೆ.

ಈಚೆಗೆ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದವಚನಾನಂದ ಸ್ವಾಮೀಜಿ, ‘14ರಂದು ಬೆಳಿಗ್ಗೆ 11.30ಕ್ಕೆ ಹರ ಜಾತ್ರಾ ಮಹೋತ್ಸವ ಹಾಗೂ ಯುವ ಸಮಾವೇಶವನ್ನು ವಿಜಯ‍ಪುರ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಆರ್ಟ್‌ ಆಫ್‌ ಲಿವಿಂಗ್‌ನ ಶ್ರೀ ಶ್ರೀ ಶ್ರೀ ರವಿಶಂಕರ ಗುರೂಜಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಭಾಗವಹಿಸಲಿದ್ದಾರೆ’ ಎಂದರು.

‘ಸಂಘದ 25ನ ವರ್ಷಾಚರಣೆ ಪ್ರಯುಕ್ತ ಅಂದು ಮಧ್ಯಾಹ್ನ 2.30ಕ್ಕೆ ಏರ್ಪಡಿಸಿರುವ ಬೆಳ್ಳಿಬೆಡಗು ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ನಿಡಸೋಸಿ ಸಿದ್ಧಸಂಸ್ಥಾನ ಮಠದ ಪಂಚಮ ಲಿಂಗೇಶ್ವರ ಸ್ವಾಮೀಜಿ ಭಾಗವಹಿಸುವರು’ ಎಂದರು.

ADVERTISEMENT

‘15ರಂದು ಬೆಳಿಗ್ಗೆ 8.30ರಿಂದ ನಡೆಯುವ ಅಕ್ಕಮಹಾದೇವಿ ವಚನ ವಿಜಯೋತ್ಸವವನ್ನು ಸಚಿವೆ ಶಶಿಕಲಾ ಜೊಲ್ಲೆ ಉದ್ಘಾಟಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.