ಬೆಂಗಳೂರು: ಹಲವು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಎಸ್ಐಟಿ ಕಸ್ಟಡಿಯಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜುಲೈ 8ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದು, ಪ್ರಜ್ವಲ್ ಅವರು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದರು.
ಅತ್ಯಾಚಾರ ಪ್ರಕರಣ ದಾಖಲಾದ ಮೇಲೆ ಪ್ರಜ್ವಲ್ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದರು. ಅವರು ವಾಪಸ್ಸಾದ ಮೇಲೆ ಎಸ್‌ಐಟಿ ಬಂಧಿಸಿತ್ತು.
ಮೇ 21ರಂದು ಬಂಧಿತರಾಗಿದ್ದ ಪ್ರಜ್ವಲ್ ಅವರು ಮೇ 31ರಿಂದ ಜೂನ್ 10ರ ವರೆಗೆ ಎಸ್ಐಟಿ ಕಸ್ಟಡಿಯಲ್ಲಿದ್ದರು. ನಂತರ, ಎರಡನೇ ಅತ್ಯಾಚಾರ ಪ್ರಕರಣದಲ್ಲಿ ಜೂನ್ 13ರಿಂದ 18ರವರೆಗೆ ಎಸ್ಐಟಿ ಕಸ್ಟಡಿಯಲ್ಲಿದ್ದರು. ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಜೂನ್ 24ರ ವರೆಗೆ ಎಸ್ಐಟಿ ವಶಕ್ಕೆ ನ್ಯಾಯಾಲಯ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.