ಕೊಪ್ಪಳ: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಇದುವರೆಗೆ ಯಾವುದೇ ಆಹ್ವಾನ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈವರೆಗೆ ಆಹ್ವಾನ ಬಂದಿಲ್ಲ. ಆಹ್ವಾನ ಬಂದ ಮೇಲೆ ಈ ಬಗ್ಗೆ ಯೋಚಿಸಲಾಗುವುದು’ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕಿ ಸೋನಿಯಾಗಾಂಧಿ ಅವರಿಗೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಬಂದಿದ್ದು, ಅವರು(ಖರ್ಗೆ ಮತ್ತು ಸೋನಿಯಾ) ಭಾಗವಹಿಸುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶುಕ್ರವಾರ ಕಾಂಗ್ರೆಸ್ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 6 ಸಾವಿರಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.