ADVERTISEMENT

Video | ಪ್ರಜ್ವಲ್ ರೇವಣ್ಣ ಉಚ್ಚಾಟನೆ; ಅಧಿಕೃತ ಆದೇಶ ಬಾಕಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಏಪ್ರಿಲ್ 2024, 14:10 IST
Last Updated 29 ಏಪ್ರಿಲ್ 2024, 14:10 IST

ಹಾಸನದ ಹಾಲಿ ಸಂಸದ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಭಾಗಿಯಾಗಿದ್ದಾರೆ ಎನ್ನಲಾಗಿರುವ ಲೈಂಗಿಕ ಹಗರಣ ಈಗ ದೇಶದಾದ್ಯಂತ ಸಂಚಲನ ಸೃಷ್ಟಿ ಮಾಡಿದೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ತೀರ್ಮಾನಿಸಿದ್ದಾರೆ ಹುಬ್ಬಳ್ಳಿಯಲ್ಲಿ ಮಂಗಳವಾರ ನಡೆಯುವ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಆ ಬಗ್ಗೆ ಅಧಿಕೃತ ಅದೇಶ ಹೊರಡಿಸಲಾಗುವುದು ಎಂದು ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಶಿವಮೊಗ್ಗದಲ್ಲಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.