ಬೆಂಗಳೂರು: ಆರೋಗ್ಯ ಸಮಸ್ಯೆಯ ಕಾರಣದಿಂದ ದೆಹಲಿಯಲ್ಲಿ ಆಯೋಜನೆಗೊಂಡಿರುವ ಜಿ20 ಶೃಂಗಸಭೆಯ ಔತಣಕೂಟದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ ಅವರು, ‘ಆರೋಗ್ಯ ಕಾರಣಗಳಿಂದಾಗಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮುಜಿ ಅವರು ಆಯೋಜಿಸಿರುವ ಜಿ 20 ಔತಣಕೂಟದಲ್ಲಿ ನಾನು ಭಾಗವಹಿಸಲಾಗುತ್ತಿಲ್ಲ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ತಿಳಿಸಿದ್ದೇನೆ. ಜಿ 20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ’ ಎಂದು ಬರೆದು ಪ್ರಧಾನಿ ಕಚೇರಿ ಮತ್ತು ರಾಷ್ಟ್ರಪತಿ ಭವನವನ್ನು ಟ್ಯಾಗ್ ಮಾಡಿದ್ದಾರೆ.
ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡ ಅವರಿಗೆ ಶನಿವಾರ ನಡೆಯಲಿರುವ ಜಿ 20 ಶೃಂಗಸಭೆಯ ಔತಣಕೂಟಕ್ಕೆ ಆಹ್ವಾನ ನೀಡಲಾಗಿತ್ತು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ಈ ಔತಣಕೂಟ ನಡೆಯಲಿದೆ. ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಲಾಗಿದೆ.
ಇದನ್ನೂ ಓದಿ: G20 Summit: ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ದೇವೇಗೌಡರಿಗೆ ಔತಣಕೂಟಕ್ಕೆ ಆಹ್ವಾನ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.