ADVERTISEMENT

ನ್ಯೂಜೆರ್ಸಿಯಲ್ಲಿ ದೇಗುಲಕ್ಕೆ ಮುಖ್ಯಮಂತ್ರಿ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2019, 18:26 IST
Last Updated 30 ಜೂನ್ 2019, 18:26 IST
ನ್ಯೂಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆಗೆ ಸಂಬಂಧಿಸಿದ ಧಾರ್ಮಿಕ ವಿಧಿ–ವಿಧಾನಗಳಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭಾಗವಹಿಸಿದ್ದರು. ನಿರ್ಮಲಾನಂದನಾಥ ಸ್ವಾಮೀಜಿ ಇದ್ದರು.
ನ್ಯೂಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆಗೆ ಸಂಬಂಧಿಸಿದ ಧಾರ್ಮಿಕ ವಿಧಿ–ವಿಧಾನಗಳಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭಾಗವಹಿಸಿದ್ದರು. ನಿರ್ಮಲಾನಂದನಾಥ ಸ್ವಾಮೀಜಿ ಇದ್ದರು.   

ಬೆಂಗಳೂರು: ಅಮೆರಿಕದ ನ್ಯೂಜೆರ್ಸಿಯ ಸೋಮರೆಟ್ಸ್‌ ಎಂಬಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ನಿರ್ಮಿಸುತ್ತಿರುವ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನಕ್ಕೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ಈ ದೇವಾಲಯವು ಭಾರತೀಯರು ಮತ್ತು ಕನ್ನಡಿಗರಿಗೆ ಪ್ರಮುಖ ಸಾಂಸ್ಕೃತಿಕ ಕೇಂದ್ರವಾಗಿ ರೂಪುಗೊಳ್ಳಲಿದೆ. ಹೊರನಾಡ ಕನ್ನಡಿಗರು ತಮ್ಮ ಬೇರುಗಳನ್ನು ಬಲಪಡಿಸಲು ಮತ್ತು ಸಂಸ್ಕೃತಿಯೊಂದಿಗೆ ಬೆಸೆದುಕೊಳ್ಳಲು ಈ ರೀತಿಯ ಕೇಂದ್ರಗಳು ಮಹತ್ವದ ಪಾತ್ರವಹಿಸುತ್ತವೆ ಎಂದು ಹೇಳಿದರು.

ದೇವಾಲಯ ನಿರ್ಮಾಣಗೊಳ್ಳುವ ಸ್ಥಳವನ್ನು ಪರಿಶೀಲಿಸುತ್ತಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಆದಿಚುಂಚನಗಿರಿ ಮಹಾಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ, ಸಚಿವ ಸಿ.ಎಸ್‌.ಪುಟ್ಟೇಗೌಡ ಮತ್ತಿತರರು.

ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರು ದೇವಾಲಯ ನಿರ್ಮಾಣದ ಕಾರ್ಯದಲ್ಲಿ ಕೈಜೋಡಿಸಬೇಕು ಎಂದೂ ಮನವಿ ಮಾಡಿದರು.

ADVERTISEMENT

ಆದಿಚುಂಚನಗಿರಿ ಮಹಾ ಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಭೂಮಿ ಪೂಜೆಗೆ ಸಂಬಂಧಿಸಿದ ಧಾರ್ಮಿಕ ವಿಧಿವಿಧಾನಗಳು ನೆರವೇರಿತು.

ಸಚಿವರಾದ ಸಿ.ಎಸ್‌.ಪುಟ್ಟರಾಜು, ಸಾ.ರಾ.ಮಹೇಶ್‌, ವಿಧಾನಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.