ಬೆಂಗಳೂರು: ‘ಚುನಾವಣೆಯಲ್ಲಿ ಅಕ್ರಮ ನಡೆಸಿ ಜಯಗಳಿಸಿರುವ ಹೊಳೆನರಸೀಪುರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು’ ಎಂದು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಡಿ.ದೇವರಾಜೇಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 25ಕ್ಕೆ ಮುಂದೂಡಿದೆ.
ಈ ಸಂಬಂಧ ಡಿ.ದೇವರಾಜೇಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರ ಹಾಗೂ ದೂರುದಾರರ ಪರ ವಕೀಲರು ವಾದ ಮಂಡಿಸಲು ಸಮಯಾವಕಾಶ ಕೋರಿದ್ದರಿಂದಾಗಿ, ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.