ಬೆಂಗಳೂರು: ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ನೀಡಿರುವ ಅನುದಾನ ವಿವರ.
* ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ₹ 950 ಕೋಟಿ.
* ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗನ ಕಾಯಿಲೆ ಸಂಶೋಧನಾ ಮತ್ತು ಚಿಕಿತ್ಸಾ ಘಟಕ ಪ್ರಾರಂಭ.
* ತುಮಕೂರು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ₹ 60 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ.
* ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ₹ 50 ಕೋಟಿ.
* ವಿಜಯಪುರ ಜಿಲ್ಲೆಯಲ್ಲಿ ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ ಪ್ರಾರಂಭಿಸಲು ₹ 40 ಕೋಟಿ.
* ₹ 10 ಕೋಟಿ ವೆಚ್ಚದಲ್ಲಿ ನಾಲ್ಕು ವಿಭಾಗೀಯ ಮಾದರಿ ರಕ್ತನಿಧಿ ಕೇಂದ್ರಗಳ ಸ್ಥಾಪನೆ.
* ದೊಡ್ಡಬಳ್ಳಾಪುರ ತಾಲ್ಲೂಕು ಆಸ್ಪತ್ರೆಯ ಮೇಲ್ದರ್ಜೆಗೇರಿಸಲು (250 ಹಾಸಿಗೆಗಳಿರುವಂತೆ) ₹ 10 ಕೋಟಿ.
* ಆಯ್ದ 11 ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ₹ 2 ಕೋಟಿ ವೆಚ್ಚದಲ್ಲಿ ಡಿಎನ್‌ಬಿ ಕೇಂದ್ರಗಳ ಸ್ಥಾಪನೆ
* ಬೆಂಗಳೂರಿನ ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯಲ್ಲಿ ಕ್ರೀಡಾ ರೋಗಿಗಳ ವಿಭಾಗ ಆರಂಭ. ರೋಬೋಟಿಕ್ ಶಸ್ತ್ರ ಚಿಕಿತ್ಸಾ ಸೌಲಭ್ಯಕ್ಕೆ ₹ 10 ಕೋಟಿ.
* ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೈಕೆಗಾಗಿ 49 ತಾಲ್ಲೂಕು ಆಸ್ಪತ್ರೆಗಳಲ್ಲಿ ₹ 1 ಕೋಟಿ ವೆಚ್ಚದಲ್ಲಿ ‘ಪೌಷ್ಟಿಕ ಪುನಶ್ಚೇತನ ಕೇಂದ್ರ’ಗಳ ಸ್ಥಾಪನೆ.
* ಸರ್ಕಾರಿ ಹಾಗೂ ಖಾಸಗಿ ಸ್ವಾಮ್ಯದ ಕ್ಷ–ಕಿರಣ ಕೇಂದ್ರಗಳ ಸುರಕ್ಷತೆಯನ್ನು ‘ಅಟಾಮಿಕ್ ಎನರ್ಜಿ ರೀಸರ್ಚ್ ಬೋರ್ಡ್’ ಮಾರ್ಗದರ್ಶನದಂತೆ ಮಾಡುವ ನಿಟ್ಟಿನಲ್ಲಿ ಕ್ಷ-ಕಿರಣ ಸುರಕ್ಷತಾ ನಿರ್ದೇಶನಾಲಯ ಸ್ಥಾಪನೆ.
* ಮಂಗಳೂರು, ತುಮಕೂರು, ವಿಜಯಪುರ, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಚಿಕ್ಕಮಗಳೂರು, ಹಾವೇರಿ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಡಿಜಿಟಲ್ ಸ್ತನರೇಖನ ವ್ಯವಸ್ಥೆ (ಮ್ಯಾಮೋಗ್ರಾಮ್) ಹಾಗೂ ಪ್ಯಾಪ್ ಸ್ಮಿಯರ್ ವ್ಯವಸ್ಥೆ ಪ್ರಾರಂಭ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.