ADVERTISEMENT

ಕುಂಭ ಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವವರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 13:02 IST
Last Updated 15 ಏಪ್ರಿಲ್ 2021, 13:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ಕೂಡಲೇ ಆರ್‌ಟಿ-ಪಿಸಿಆರ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

‘ಯಾತ್ರಿಗಳು ವಾಪಸ್ಸಾದ ಬಳಿಕ ಕಡ್ಡಾಯವಾಗಿ ತಮ್ಮ ಮನೆಗಳಲ್ಲಿ ಪ್ರತ್ಯೇಕವಾಸದಲ್ಲಿರಬೇಕು’ ಎಂದು ಪ್ರಕಟಣೆಯಲ್ಲಿತಿಳಿಸಲಾಗಿದೆ.

‘ಕೊರೊನಾ ಪರೀಕ್ಷೆ ವರದಿಯಲ್ಲಿ ನೆಗೆಟಿವ್ ಬಂದ ನಂತರವಷ್ಟೇ ಯಾತ್ರಿಕರು ತಮ್ಮ ಎಂದಿನ ಕಾರ್ಯಗಳಲ್ಲಿ ತೊಡಗಬೇಕು’ ಎಂದುವಿವರಿಸಲಾಗಿದೆ.

ADVERTISEMENT

ಇವನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.