ADVERTISEMENT

2,849 ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆ ಖಾಲಿ: 8 ವರ್ಷವಾದರೂ ನೇಮಕಾತಿಯಿಲ್ಲ

ಹುದ್ದೆಗಳ ಭರ್ತಿಗೆ ಆಕಾಂಕ್ಷಿಗಳ ಆಗ್ರಹ

ಮಲ್ಲಪ್ಪ ಪಾರೇಗಾಂವ
Published 6 ಅಕ್ಟೋಬರ್ 2024, 23:30 IST
Last Updated 6 ಅಕ್ಟೋಬರ್ 2024, 23:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕಲಬುರಗಿ: ರಾಜ್ಯದಲ್ಲಿ 2,849 ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳು ಖಾಲಿಯಿದ್ದು, ಕಳೆದ 8 ವರ್ಷಗಳಿಂದ ಒಂದು ಹುದ್ದೆಯೂ ಭರ್ತಿಯಾಗಿಲ್ಲ. 

ಸಮುದಾಯದ ಆರೋಗ್ಯ ಕಾಪಾಡುವಲ್ಲಿ ತಳಮಟ್ಟದಿಂದಲೂ ಆರೋಗ್ಯ ನಿರೀಕ್ಷಣಾಧಿಕಾರಿಗಳು ಶ್ರಮಿಸುತ್ತಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳ ಅನುಷ್ಠಾನದಿಂದ ಹಿಡಿದು ಸಾಂಕ್ರಾಮಿಕ ರೋಗಗಳ ನಿಯಂತ್ರಣ, ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು, ಹದಿಹರೆಯದವರಿಗೆ ಲೈಂಗಿಕ ಶಿಕ್ಷಣ, ಸಮುದಾಯ ಮಟ್ಟದಲ್ಲಿ ಆರೋಗ್ಯ ಜಾಗೃತಿ, ಜನನ–ಮರಣ ವರದಿ ಸಂಗ್ರಹ ಸೇರಿದಂತೆ 30ಕ್ಕೂ ಹೆಚ್ಚು ಆರೋಗ್ಯ ಯೋಜನೆಗಳ ಅನುಷ್ಠಾನದ ಕಾರ್ಯನಿರ್ವಹಿಸುತ್ತಾರೆ. ಸಮುದಾಯದ ಕಟ್ಟ ಕಡೆಯ ವ್ಯಕ್ತಿಗೆ ಆರೋಗ್ಯ ಯೋಜನೆ ತಲುಪಿಸುವಲ್ಲಿ ಇವರು ಪ್ರಮುಖ ಪಾತ್ರವಹಿಸುತ್ತಾರೆ. ಆದರೆ, ಸಿಬ್ಬಂದಿ ಕೊರತೆಯಿಂದಾಗಿ ಯೋಜನೆಗಳ ಅನುಷ್ಠಾನ ಸಮರ್ಪಕವಾಗಿ ಆಗುತ್ತಿಲ್ಲ. 

ADVERTISEMENT

ಆರೋಗ್ಯ ಕಾಯ್ದೆಯಂತೆ ಪ್ರತಿ 5,000 ಜನರಿಗೆ ಒಬ್ಬರು ಆರೋಗ್ಯ ನಿರೀಕ್ಷಣಾಧಿಕಾರಿ ಕರ್ತವ್ಯ ನಿರ್ವಹಿಸಬೇಕು. ಈ ಕಾಯ್ದೆಯಂತೆ ರಾಜ್ಯದಲ್ಲಿ 14 ಸಾವಿರ ಆರೋಗ್ಯ ನಿರೀಕ್ಷಣಾಧಿಕಾರಿಗಳ ಅಗತ್ಯವಿದೆ. ಸದ್ಯ 5,944 ಹುದ್ದೆಗಳ ಭರ್ತಿಗೆ ಮಾತ್ರ ಮಂಜೂರಾತಿ ದೊರೆತಿದೆ. ಇದರಲ್ಲಿ 3,095 ಹುದ್ದೆಗಳು ಮಾತ್ರ ಭರ್ತಿಯಾಗಿವೆ. 

‘2016ರಲ್ಲಿ 465 ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗಿತ್ತು. ಬಳಿಕ ಇದುವರೆಗೂ ಹುದ್ದೆಗಳ ಭರ್ತಿಯಾಗಿಲ್ಲ. ಹುದ್ದೆಗಳ ಭರ್ತಿಗಾಗಿ ಹಲವು ಬಾರಿ ಜನಪ್ರತಿನಿಧಿಗಳು, ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ಸಂಬಂಧ ರಾಜ್ಯಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಿದರೂ ಪ್ರಯೋಜನವಾಗಿಲ್ಲ. ಸಚಿವ ದಿನೇಶ್ ಗುಂಡೂರಾವ್ ಅವರು ಹುದ್ದೆ ಭರ್ತಿಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಆದರೆ ಭರವಸೆ ಭರವಸೆಯಾಗಿಯೇ ಉಳಿದಿದೆ’ ಎಂದು ಆಕಾಂಕ್ಷಿಗಳು ಬೇಸರ ವ್ಯಕ್ತಪಡಿಸುತ್ತಾರೆ. ಆದರೆ, ಸಿಬ್ಬಂದಿ ಕೊರತೆಯಿಂದಾಗಿ ಯೋಜನೆಗಳ ಅನುಷ್ಠಾನ ಸಮರ್ಪಕವಾಗಿ ಆಗುತ್ತಿಲ್ಲ. 

ಆರೋಗ್ಯ ಕಾಯ್ದೆಯಂತೆ ಪ್ರತಿ 5,000 ಜನರಿಗೆ ಒಬ್ಬರು ಆರೋಗ್ಯ ನಿರೀಕ್ಷಣಾಧಿಕಾರಿ ಕರ್ತವ್ಯ ನಿರ್ವಹಿಸಬೇಕು. ಈ ಕಾಯ್ದೆಯಂತೆ ರಾಜ್ಯದಲ್ಲಿ 14 ಸಾವಿರ ಆರೋಗ್ಯ ನಿರೀಕ್ಷಣಾಧಿಕಾರಿಗಳ ಅಗತ್ಯವಿದೆ. ಸದ್ಯ 5,944 ಹುದ್ದೆಗಳ ಭರ್ತಿಗೆ ಮಾತ್ರ ಮಂಜೂರಾತಿ ದೊರೆತಿದೆ. ಇದರಲ್ಲಿ 3,095 ಹುದ್ದೆಗಳು ಮಾತ್ರ ಭರ್ತಿಯಾಗಿವೆ. 

‘2016ರಲ್ಲಿ 465 ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗಿತ್ತು. ಬಳಿಕ ಇದುವರೆಗೂ ಹುದ್ದೆಗಳ ಭರ್ತಿಯಾಗಿಲ್ಲ. ಹುದ್ದೆಗಳ ಭರ್ತಿಗಾಗಿ ಹಲವು ಬಾರಿ ಜನಪ್ರತಿನಿಧಿಗಳು, ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ಸಂಬಂಧ ರಾಜ್ಯಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಿದರೂ ಪ್ರಯೋಜನವಾಗಿಲ್ಲ. ಸಚಿವ ದಿನೇಶ್ ಗುಂಡೂರಾವ್ ಅವರು ಹುದ್ದೆ ಭರ್ತಿಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಆದರೆ ಭರವಸೆ ಭರವಸೆಯಾಗಿಯೇ ಉಳಿದಿದೆ’ ಎಂದು ಆಕಾಂಕ್ಷಿಗಳು ಬೇಸರ ವ್ಯಕ್ತಪಡಿಸುತ್ತಾರೆ.

ವಯೋಮಿತಿ ಮೀರುವ ಚಿಂತೆ

ರಾಜ್ಯದ 275ಕ್ಕೂ ಹೆಚ್ಚು ಸರ್ಕಾರಿ ಮತ್ತು ಖಾಸಗಿ ಅರೆವೈದ್ಯಕೀಯ ಕಾಲೇಜುಗಳಿಂದ ಆರೋಗ್ಯ ನಿರೀಕ್ಷಣಾಧಿಕಾರಿ ಕೋರ್ಸ್‌ ಮುಗಿಸಿ, ಪ್ರತಿ ವರ್ಷ 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೊರಬರುತ್ತಾರೆ.

ಆದರೆ, ಉದ್ಯೋಗ ಅವಕಾಶವಿಲ್ಲದೇ ಪರದಾಡುವಂತಾಗಿದೆ. ನಿರೀಕ್ಷಣಾಧಿಕಾರಿ ಕೋರ್ಸ್‌ ಮುಗಿಸುವವರಿಗೆ ಖಾಸಗಿ ವಲಯದಲ್ಲೂ ಉದ್ಯೋಗ ಸಿಗುವುದಿಲ್ಲ. ಸರ್ಕಾರದ ನೇಮಕಾತಿಗಾಗಿಯೇ ಕಾಯುವಂತಾಗಿದ್ದು, ವಯೋಮಿತಿ ಮೀರುವ ಚಿಂತೆ ಕಾಡುತ್ತಿದೆ.

ಹುದ್ದೆಗಳ ಭರ್ತಿಗೆ ಅಗತ್ಯ ಮಾಹಿತಿಯನ್ನು ಆರ್ಥಿಕ ಇಲಾಖೆಗೆ ಒದಗಿಸಲಾಗಿದ್ದು, ಅದು ಅನುಮೋದನೆ ನೀಡುತ್ತಿಲ್ಲ. ಈ ಸಂಬಂಧ ಸರ್ಕಾರ ಕ್ರಮಕೈಗೊಳ್ಳಬೇಕು.
–ಪ್ರವೀಣ ಯಾದವ, ರಾಜ್ಯ ಸಂಘಟನಾ ಕಾರ್ಯದರ್ಶಿ, ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆ ಆಕಾಂಕ್ಷಿಗಳ ಸಂಘ
ಹೆಲ್ತ್‌ ಇನ್‌ಸ್ಪೆಕ್ಟರ್‌ ಕೋರ್ಸ್‌ ಮುಗಿಸಿ 6 ವರ್ಷ ಆಗುತ್ತಿದೆ. ಸರ್ಕಾರ ಖಾಲಿ ಹುದ್ದೆ ಭರ್ತಿ ಮಾಡುತ್ತಿಲ್ಲ. ಖಾಸಗಿ ವಲಯದಲ್ಲೂ ಕೆಲಸ ಸಿಗುತ್ತಿಲ್ಲ. ಶೀಘ್ರ ಖಾಲಿ ಹುದ್ದೆ ಭರ್ತಿ ಮಾಡಬೇಕು.
–ರಾಘವೇಂದ್ರ, ಹುದ್ದೆ ಆಕಾಂಕ್ಷಿ, ತುಮಕೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.