ADVERTISEMENT

ಶಾಖಾಘಾತ: ರಾಜ್ಯದಲ್ಲಿ 614 ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2024, 15:50 IST
Last Updated 16 ಏಪ್ರಿಲ್ 2024, 15:50 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಅನಾರೋಗ್ಯ ಸಮಸ್ಯೆಗೆ ಒಳಗಾಗುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಈವರೆಗೆ ಒಟ್ಟು 614 ಶಾಖಾಘಾತ ಪ್ರಕರಣಗಳು ದೃಢಪಟ್ಟಿವೆ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಕೊಡಗು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಶಾಖಾಘಾತ ಪ್ರಕರಣಗಳು ವರದಿಯಾಗಿವೆ. ಬಿಸಿಲಿನ ಶಾಖಕ್ಕೆ ಕೆಲವರಲ್ಲಿ ದದ್ದುಗಳು ಕಾಣಿಸಿಕೊಳ್ಳುತ್ತಿವೆ. ಈವರೆಗೆ 398 ಬಿಸಿಲಿಗೆ ಸಂಬಂಧಿಸಿದ ದದ್ದು ಪ್ರಕರಣಗಳು ದೃಢಪಟ್ಟಿವೆ. ಕೆಲವರಲ್ಲಿ ಸ್ನಾಯುಸೆಳೆತ ಸಮಸ್ಯೆ ಕಾಣಿಸಿಕೊಂಡಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಖಾಘಾತ ಪ್ರಕರಣಗಳು ವರದಿಯಾಗಿವೆ. 

ADVERTISEMENT

ಬಾಗಲಕೋಟೆ ಹಾಗೂ ಚಿತ್ರದುರ್ಗದಲ್ಲಿ ತಲಾ 50 ಶಾಖಾಘಾತ ಪ್ರಕರಣಗಳು ದೃಢಪಟ್ಟಿವೆ. ಕಲಬುರಗಿ (39), ರಾಯಚೂರು (38), ಯಾದಗಿರಿ (35), ಬೆಳಗಾವಿ (32), ದಕ್ಷಿಣ ಕನ್ನಡ (32) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ಖಚಿತಪಟ್ಟಿವೆ. ಉಳಿದ ಜಿಲ್ಲೆಗಳಲ್ಲಿ ಈ ಪ್ರಕರಣಗಳ ಸಂಖ್ಯೆ 30ರೊಳಗೆ ಇದೆ. 

‘ಬಿಸಿಗಾಳಿಯಿಂದ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗಿ, ಶಾಖಾಘಾತ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಆಗಾಗ ನೀರು ಕುಡಿಯಬೇಕು. ತಾಪಮಾನ ಹೆಚ್ಚಳದ ಕಾರಣ ಮಕ್ಕಳು, ವೃದ್ಧರು, ಗರ್ಭಿಣಿಯರು, ಹೃದಯ ಸೇರಿ ವಿವಿಧ ಅನಾರೋಗ್ಯ ಸಮಸ್ಯೆ ಇರುವವರ ರಕ್ಷಣೆಗೆ ಆದ್ಯತೆ ನೀಡಬೇಕು. ತಾಜಾ ಹಣ್ಣುಗಳ ಸೇವನೆ ಸೇರಿ ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು’ ಎಂದು ಇಲಾಖೆ ಹೇಳಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.