ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ ಮಳೆ ಮುಂದುವರಿದಿದೆ. ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಇಳಿಕೆ ಅಗಿಲ್ಲ. 17,231 ಕ್ಯುಸೆಕ್ ನೀರು ಬರುತ್ತಿದ್ದು, 21,166 ಕ್ಯುಸೆಕ್ ನೀರನ್ನು ನದಿಗೆ ಹೊರಬಿಡಲಾಗುತ್ತಿದೆ.
ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 14 ಸೆಂ.ಮೀ, ಚೆಂಬು ಗ್ರಾಮದಲ್ಲಿ 12 ಸೆಂ.ಮೀ ನಷ್ಟು ಮಳೆ ಸುರಿದಿದೆ.
ಎನ್‌ಡಿಆರ್‌ಎಫ್ ತಂಡವು ಪಯಸ್ವಿನಿ ನದಿಯ ಕಿಂಡಿ ಅಣೆಕಟ್ಟೆಗೆ ಸಿಲುಕಿದ್ದ ಮರದ ದಿಮ್ಮಿಗಳನ್ನು ತೆರವುಗೊಳಿಸಿವೆ.
ಹವಾಮಾನ ಇಲಾಖೆ ಭಾರಿ ಮಳೆ ಸುರಿಯುವ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಅಂಗನವಾಡಿ, 1ನೇ ತರಗತಿಯಿಂದ 10 ನೇ ತರಗತಿವರೆಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಕಳೆದ 5 ದಿನಗಳಿಂದ ಬಂದ್ ಆಗಿದ್ದ ಕಾಲೇಜುಗಳು ಇಂದು ಆರಂಭವಾಗಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.