ಬೆಂಗಳೂರು: ರಾಜಧಾನಿ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಶುಕ್ರವಾರ ಬೆಳಿಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು.
ಸಂಜೆ 5 ಗಂಟೆ ಸುಮಾರಿಗೆ ಮಳೆ ಆರಂಭವಾಗಿದ್ದು, ಹಲವೆಡೆ ಆರ್ಭಟಿಸಿ ಸುರಿಯುತ್ತಿದೆ.
ರಾಜಾಜಿನಗರ, ವಿಜಯನಗರ, ಮಹಾಲಕ್ಷ್ಮಿ ಲೇಔಟ್, ಬಸವೇಶ್ವರ ನಗರ ಸೇರಿದಂತೆ ಹಲವೆಡೆ ಮಳೆ ಆಗುತ್ತಿದೆ.ಸಿಡಿಲು ಹಾಗೂ ಗುಡುಗಿನ ಆರ್ಭಟವೂ ಜೋರಾಗಿದೆ. ಗುರುವಾರ ಸಂಜೆಯೂ ಅಲ್ಲಲ್ಲಿ ತುಂತುರು ಮಳೆ ಆಗಿತ್ತು. ಇಂದು ಶುಕ್ರವಾರ ಮಳೆ ಹೆಚ್ಚಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.