ADVERTISEMENT

ಕೊಡಗು | ಭಾರಿ ಮಳೆ; ಹಾರಂಗಿ ಜಲಾಶಯ ವ್ಯಾಪ್ತಿಯಲ್ಲಿ ಪ್ರವಾಹದ ಮುನ್ನಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2024, 6:17 IST
Last Updated 14 ಜುಲೈ 2024, 6:17 IST
   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾನುವಾರ ಎಡೆಬಿಡದೆ ಭಾರಿ ಮಳೆ ಸುರಿಯುತ್ತಿದೆ‌. ಇಲ್ಲಿನ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ಕೇವಲ 3 ಗಂಟೆಗಳಲ್ಲಿ 3 ಸಾವಿರ ಕ್ಯುಸೆಕ್‌ಗೆ ಏರಿಕೆ ಕಂಡಿದೆ. ಭಾರಿ ಪ್ರಮಾಣದ ನೀರು ಜಲಾಶಯಕ್ಕೆ ಹರಿದು ಬರುತ್ತಿರುವುದರಿಂದ ಅಧಿಕಾರಿಗಳು ಪ್ರವಾಹದ ಮುನ್ಸೂಚನೆ ನೀಡಿದ್ದಾರೆ.

ಭಾನುವಾರ ಬೆಳಿಗ್ಗೆ 8 ಗಂಟೆಯಲ್ಲಿ 4,691 ಕ್ಯುಸೆಕ್ ಇದ್ದ ಒಳಹರಿವು 11 ಗಂಟೆ ಹೊತ್ತಿಗೆ 7,720 ಕ್ಯುಸೆಕ್‌ಗೆ ಏರಿಕೆಯಾಗಿದೆ. ಕ್ಷಣದಿಂದ ಕ್ಷಣಕ್ಕೆ ನೀರಿನ ಒಳಹರಿವು ಏರಿಕೆಯಾಗುತ್ತಿರುವುದರಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

'ಇನ್ನಷ್ಟು ಭಾರಿ‌‌ ಮಳೆ ಬೀಳುವ ಮುನ್ನಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾಗಿ, ಒಳಹರಿವು ಇನ್ನಷ್ಟು ಹೆಚ್ಚಾಗುವ ಸಂಭವ ಇರುವುದರಿಂದ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡಲಾಗುವುದು. ಕಾವೇರಿ ಮತ್ತು ಹಾರಂಗಿ ನದಿ ದಂಡೆಯಲ್ಲಿ ವಾಸ ಮಾಡುವವರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು' ಎಂದು ಜಲಾಶಯದ ಕಾರ್ಯಪಾಲಕ ಎಂಜಿನಿಯರ್ ಐ.ಕೆ.ಪುಟ್ಟಸ್ವಾಮಿ ತಿಳಿಸಿದ್ದಾರೆ.

ADVERTISEMENT

ಮಡಿಕೇರಿಯಲ್ಲಿ ಬಿರುಸಿನ ಗಾಳಿಯೊಂದಿಗೆ ಭಾರಿ ಮಳೆ ಸುರಿಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.