ADVERTISEMENT

ರಾಜ್ಯದಲ್ಲಿ ನಾಳೆ ಭಾರಿ ಮಳೆ: ಐದು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್‌’ ಘೋಷಣೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2024, 15:36 IST
Last Updated 14 ಅಕ್ಟೋಬರ್ 2024, 15:36 IST
<div class="paragraphs"><p>ಮಳೆ ( ಸಾಂಕೇತಿಕ ಚಿತ್ರ )&nbsp;</p></div>

ಮಳೆ ( ಸಾಂಕೇತಿಕ ಚಿತ್ರ ) 

   

ಬೆಂಗಳೂರು: ರಾಜ್ಯದ ಬಳ್ಳಾರಿ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯದಲ್ಲಿ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್‌’ ಘೋಷಿಸಿದೆ.

ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಜಿಲ್ಲೆಗಳಲ್ಲೂ ಗುಡುಗು ಸಹಿತ ಜೋರು ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ಮಾಹಿತಿ ನೀಡಿದ್ದು, ಈ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.

ADVERTISEMENT

ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ‌

ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಹಾವೇರಿ ಜಿಲ್ಲೆಯ ಹಿರೇಕೆರೂರು ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಗಟಿಯಲ್ಲಿ ತಲಾ 5 ಸೆಂ.ಮೀ ಮತ್ತು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ 4 ಸೆಂ.ಮೀ. ಮಳೆ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.