ADVERTISEMENT

Rain Alert: ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ

ನಾಲ್ಕು ಜಿಲ್ಲೆಗಳಿಗೆ ‘ಆರೆಂಜ್‌’, 12 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2024, 12:56 IST
Last Updated 15 ಆಗಸ್ಟ್ 2024, 12:56 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶುಕ್ರವಾರ ನಾಲ್ಕು ಜಿಲ್ಲೆಗಳಿಗೆ ‘ಆರೆಂಜ್‌’ ಹಾಗೂ 12 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಸೂಚನೆ ನೀಡಲಾಗಿದೆ.

ADVERTISEMENT

ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’ ಇದೆ. ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ, ತುಮಕೂರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌‘ ಸೂಚನೆ ಕೊಡಲಾಗಿದೆ. ಹಾಸನ, ಕೊಡಗು, ಮೈಸೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶನಿವಾರ ‘ಯೆಲ್ಲೊ ಅಲರ್ಟ್‌’ ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಎರಡು ದಿನವೂ ಹಗಲು ವೇಳೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.