ADVERTISEMENT

ಸೆಪ್ಟೆಂಬರ್ 24ರಂದು ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2024, 16:15 IST
Last Updated 23 ಸೆಪ್ಟೆಂಬರ್ 2024, 16:15 IST
<div class="paragraphs"><p>Monsoon</p></div>

Monsoon

   

ಬೆಂಗಳೂರು: ರಾಜ್ಯದ ವಿವಿಧೆಡೆ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ADVERTISEMENT

‌ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಗುಡುಗು ಸಹಿತ ಮಹಿಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಸ್ಥಳಗಳಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.