ADVERTISEMENT

ಭಾರಿ ಮಳೆ: 5 ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್’ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2024, 15:42 IST
Last Updated 18 ಜುಲೈ 2024, 15:42 IST
<div class="paragraphs"><p>ಮಳೆ (ಸಾಂದರ್ಭಿಕ ಚಿತ್ರ)</p></div>

ಮಳೆ (ಸಾಂದರ್ಭಿಕ ಚಿತ್ರ)

   

ಬೆಂಗಳೂರು: ರಾಜ್ಯದ ವಿವಿಧೆಡೆ ಶುಕ್ರವಾರವೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಐದು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. 

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಧಾರಾಕಾರ ಮಳೆ ಮುಂದುವರಿಯುವ ಸಂಭವವಿದೆ. ಕೊಡಗು ಜಿಲ್ಲೆಗೆ ‘ಆರೆಂಜ್ ಅಲರ್ಟ್’, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಹಾಸನ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ADVERTISEMENT

‘ಅಲರ್ಟ್’ ನೀಡಲಾದ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ. ಕರಾವಳಿ ಉದ್ದಕ್ಕೂ ಬಿರುಗಾಳಿಯಿಂದ ಕೂಡಿದ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು. ಆದ್ದರಿಂದ, ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ಹೇಳಿದೆ. 

ಶನಿವಾರವೂ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಐದು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಎರಡು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.