ADVERTISEMENT

ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ ಮತ್ತೆ ವರ್ಗ

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 18:49 IST
Last Updated 11 ಜನವರಿ 2021, 18:49 IST

ಬೆಂಗಳೂರು: ಹಿರಿಯ ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಐಜಿಪಿ ಆಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಬೆಂಗಳೂರು ನಗರ ಹೆಚ್ಚುವರಿ ಕಮಿಷನರ್ (ಆಡಳಿತ) ಹಾಗೂಟೆಂಡರ್ ಆಹ್ವಾನ ಸಮಿತಿ ಅಧ್ಯಕ್ಷರೂ ಆಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ಡಿ. 31ರಂದು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು.

ನಿರ್ಭಯಾ ನಿಧಿಯಡಿ ರೂಪಿಸಲಾದ 'ಸುರಕ್ಷಿತ ನಗರ’ ಯೋಜನೆ ಗುತ್ತಿಗೆ ವಿಚಾರವಾಗಿ ಐಪಿಎಸ್ ಅಧಿಕಾರಿಗಳಾದ ಡಿ. ರೂಪಾ ಮತ್ತು ಹೇಮಂತ್ ನಿಂಬಾಳ್ಕರ್ ನಡುವೆ ಜಟಾಪಟಿ ನಡೆದಿತ್ತು. ಗೃಹ ಇಲಾಖೆ ಕಾರ್ಯದರ್ಶಿ ಆಗಿದ್ದ ರೂಪಾ ಅವರನ್ನು ರಾಜ್ಯ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.