ADVERTISEMENT

ಅಧಿಕ ರಕ್ತದ ಒತ್ತಡ: ಶಾಸಕ ಕೆ.ಎಸ್. ಈಶ್ವರಪ್ಪ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 23 ಜೂನ್ 2018, 17:20 IST
Last Updated 23 ಜೂನ್ 2018, 17:20 IST
   

ಶಿವಮೊಗ್ಗ:ಶಾಸಕ ಕೆ.ಎಸ್. ಈಶ್ವರಪ್ಪ ಅವರು ಅಧಿಕ ರಕ್ತದ ಒತ್ತಡ ಹಾಗೂ ಜಠರದುರಿತ ಸಮಸ್ಯೆಯಿಂದ ಶನಿವಾರ ಇಲ್ಲಿನ ಮೆಟ್ರೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿರಂತರ ಪ್ರಯಾಣ, ವಿಶ್ರಾಂತಿ ಕೊರತೆಯ ಕಾರಣ ಆರೋಗ್ಯದ ಸಮಸ್ಯೆ ಎದುರಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗಿದೆ. ಎರಡು ದಿನ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT