ADVERTISEMENT

ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧದ ತನಿಖೆಗೆ ಹೈಕೋರ್ಟ್‌ ಅಸ್ತು

​ಪ್ರಜಾವಾಣಿ ವಾರ್ತೆ
Published 5 ಜುಲೈ 2024, 23:53 IST
Last Updated 5 ಜುಲೈ 2024, 23:53 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ರಾಜ್ಯ ಕೈಗಾರಿಕೆ ಇಲಾಖೆಯ ಮಾರ್ಕೆಟಿಂಗ್‌, ಜಾಹೀರಾತು ಮತ್ತು ಪ್ರಚಾರ ಸಂಸ್ಥೆಯಲ್ಲಿ 2011-15ರಲ್ಲಿ ನಡೆದ ನೇಮಕಾತಿಯಲ್ಲಿ ಅಕ್ರಮ ನಡೆಸಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಮುರುಗೇಶ್ ಆರ್‌.ನಿರಾಣಿ ವಿರುದ್ಧದ ತನಿಖೆಗೆ ಹೈಕೋರ್ಟ್‌ ಅಸ್ತು ಎಂದಿದೆ.

ಈ ಸಂಬಂಧ ಮುರುಗೇಶ್‌ ನಿರಾಣಿ ಸಲ್ಲಿಸಿದ್ ಅರ್ಜಿಯನ್ನು, ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು ಶುಕ್ರವಾರ ವಿಚಾರಣೆ ನಡೆಸಿದರು. 

‘ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಬಹುದು. ತನಿಖೆಗೆ ಸಹಕರಿಸಿದರೆ ಅರ್ಜಿದಾರರನ್ನು  ಬಂಧಿಸುವಂತಿಲ್ಲ’ ಎಂದು ಮಧ್ಯಂತರ ನಿರ್ದೇಶನ ನೀಡಿದರು. ಪ್ರಕರಣದ ಮೂಲ ದೂರುದಾರ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಮತ್ತು ಹೈಗ್ರೌಂಡ್ಸ್‌ ಠಾಣಾ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.