ಬೆಂಗಳೂರು: ‘2011ರಿಂದ 2016ರ ನಡುವಿನ ಆರ್ಥಿಕ ವರ್ಷದ ಆಡಿಟ್ ವರದಿಗಳಲ್ಲಿನ ಆಕ್ಷೇಪಣೆಗಳಿಗೆ ಉತ್ತರ ಸಲ್ಲಿಸುವಂತೆ ನೀಡಿದ್ದ ನಿರ್ದೇಶನಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಏಕೆ ಪಾಲಿಸಿಲ್ಲ’ ಎಂದು ಹೈಕೋರ್ಟ್ ಬಿಬಿಎಂಪಿ ವಿರುದ್ಧ ಕಿಡಿಕಾರಿದೆ.
ಈ ಕುರಿತಂತೆ ‘ನಮ್ಮ ಬೆಂಗಳೂರು ಪ್ರತಿಷ್ಠಾನ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯ
ಮೂರ್ತಿ ಅಭಯ್ ಎಸ್. ಓಕಾ ಮತ್ತು ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು ಅವರಿದ್ದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.
‘ಪಾಲಿಕೆ ಉದ್ದೇಶಪೂರ್ವಕವಾಗಿಯೇ ಕೋರ್ಟ್ ಆದೇಶಗಳನ್ನು ಪಾಲಿಸುತ್ತಿಲ್ಲ ಎನಿಸುತ್ತದೆ’ ಎಂದು ವಿಚಾರಣೆ ವೇಳೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.