ADVERTISEMENT

ಇ.ಡಿ ಪ್ರಕರಣ ರದ್ದು ಕೋರಿದ್ದ ಕಟ್ಟಾ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2020, 20:08 IST
Last Updated 19 ಡಿಸೆಂಬರ್ 2020, 20:08 IST
ಕಟ್ಟಾ ಸುಬ್ರಹ್ಮಣ್ಯ ನಾಯ್ಡು
ಕಟ್ಟಾ ಸುಬ್ರಹ್ಮಣ್ಯ ನಾಯ್ಡು   

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಬಿಜೆಪಿ ಮುಖಂಡ ಕಟ್ಟಾ ಸುಬ್ರಮಣ್ಯ ನಾಯ್ಡು, ಅವರ ಪತ್ನಿ ಸೌಭಾಗ್ಯ ಮತ್ತು ಕೆಲ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಐಎಡಿಬಿ) ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್ ಆಧರಿಸಿ ಪಿಎಂಎಲ್‌ಎ ಅಡಿಯಲ್ಲಿ ಇ.ಡಿ ಪ್ರಕರಣ ದಾಖಲಿಸಿಕೊಂಡಿತ್ತು.

‘ಆಸ್ತಿ ಜಪ್ತಿ ಮಾಡಲು ಇ.ಡಿ ಕೈಗೊಂಡಿರುವ ಕ್ರಮಗಳನ್ನು ರದ್ದುಪಡಿಸಲು ಯಾವುದೇ ಆಧಾರಗಳಿಲ್ಲ. ಕಾನೂನು ಬಾಹಿರ ವಿಧಾನಗಳಿಂದ ಸಂಪಾದಿಸಿದ ಸಂಪತ್ತನ್ನು ಅನುಭವಿಸಲು ಕಾನೂನಿನಲ್ಲಿ ಅವಕಾಶ ಇಲ್ಲ’ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.