ADVERTISEMENT

ಚುನಾವಣಾ ತಕರಾರು ಅರ್ಜಿ: ಹ್ಯಾರಿಸ್‌ ಮನವಿ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2024, 16:18 IST
Last Updated 22 ಫೆಬ್ರುವರಿ 2024, 16:18 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ಬೆಂಗಳೂರು: ‘ನನ್ನ ಆಯ್ಕೆಯನ್ನು ಅನೂರ್ಜಿತಗೊಳಿಸುವಂತೆ ಕೋರಿರುವ ಬಿಜೆಪಿಯ ಪರಾಜಿತ ಅಭ್ಯರ್ಥಿ ಕೆ.ಶಿವಕುಮಾರ್ ಅರ್ಜಿಯನ್ನು ವಜಾಗೊಳಿಸಬೇಕು’ ಎಂದು ಕೋರಿದ್ದ ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಶಾಸಕ ಎನ್​.ಎ.ಹ್ಯಾರಿಸ್​ ಅವರ ಮಧ್ಯಂತರ ಮನವಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

ಈ ಸಂಬಂಧ ಕೆ.ಶಿವಕುಮಾರ್​ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್​ ಗೋವಿಂದರಾಜು ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ಇದರಿಂದಾಗಿ ಶಿವಕುಮಾರ್​ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ಮುಂದುವರೆಯಲಿದೆ.

ADVERTISEMENT

‘ಒಂದು ವೇಳೆ ಪ್ರತಿವಾದಿ ಹ್ಯಾರಿಸ್​ ಅವರ ಆಯ್ಕೆಯನ್ನು ಅನೂರ್ಜಿತ ಎಂದು ಘೋಷಿಸಿದರೂ, ಇದೇ ಕಾರಣದಿಂದಾಗಿ ಅರ್ಜಿದಾರ ಶಿವಕುಮಾರ್‌ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲು ಸಾಧ್ಯವಾಗುವುದಿಲ್ಲ. ಅರ್ಜಿದಾರರ ಮನವಿಗೆ ಸಂಬಂಧಿಸಿದಂತೆ ಆಧಾರಗಳ ಅವಶ್ಯಕತೆ ಇದೆ. ಹಾಗಾಗಿ, ಮಧ್ಯಂತರ ಅರ್ಜಿ ವಜಾಗೊಳಿಸಲಾಗುತ್ತಿದೆ’ ಎಂದು ನ್ಯಾಯಪೀಠ ತಿಳಿಸಿದೆ.

ಪ್ರಕರಣವೇನು?: ‘ಚುನಾವಣೆ ವೇಳೆ ಎನ್​.ಎ.ಹ್ಯಾರಿಸ್​ ಸಲ್ಲಿಸಿರುವ ಪ್ರಮಾಣ ಪತ್ರ ಅಸಮರ್ಪಕವಾಗಿದೆ. ಆದ್ದರಿಂದ, ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು. ನನ್ನನ್ನೇ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಂದು ಘೋಷಿಸಬೇಕು’ ಎಂದು ಕೋರಿ ಕೆ.ಶಿವಕುಮಾರ್​ ಈ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.